ETV Bharat / state

ಬಕ್ರೀದ್ ಶಾಂತಿ ಸಭೆ: ಈದ್ಗಾದಲ್ಲಿ ಸಾಮೂಹಿಕ ಪ್ರಾರ್ಥನೆ ನಿಷೇಧ - ಸಿಪಿಐ ಆನಂದ ವಾಘಮೋಡೆ

ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಇರುವುದಿಲ್ಲ. ಜಿಲ್ಲಾಡಳಿತ ಆಯಾ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಿದ್ದು, ಸೂಕ್ತ ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡು ಪ್ರಾರ್ಥನೆ ಸಲ್ಲಿಸಬೇಕು ಎಂದು ಸಿಪಿಐ ಆನಂದ ವಾಘಮೋಡೆ ತಿಳಿಸಿದ್ದಾರೆ.

Prohibition of mass prayer at Eidgah
ಬಕ್ರೀದ್ ಶಾಂತಿ ಸಭೆ: ಈದ್ಗಾದಲ್ಲಿ ಸಾಮೂಹಿಕ ಪ್ರಾರ್ಥನೆಗೆ ನಿಷೇಧ
author img

By

Published : Jul 29, 2020, 9:51 AM IST

Updated : Jul 29, 2020, 12:10 PM IST

ಮುದ್ದೇಬಿಹಾಳ: ಹೆಚ್ಚುತ್ತಿರುವ ಕೊರೊನಾ ವೈರಸ್ ಹಾವಳಿ ನಿಯಂತ್ರಿಸುವ ಉದ್ದೇಶದಿಂದ ಬಕ್ರೀದ್ ಹಬ್ಬದ ದಿನದಂದು ತಾಲೂಕಿನ ಯಾವುದೇ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಇರುವುದಿಲ್ಲ. ಜಿಲ್ಲಾಡಳಿತ ಆಯಾ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಿದ್ದು, ಸೂಕ್ತ ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡು ಪ್ರಾರ್ಥನೆ ಸಲ್ಲಿಸಬೇಕು ಎಂದು ಸಿಪಿಐ ಆನಂದ ವಾಘಮೋಡೆ ಹೇಳಿದರು.

ಬಕ್ರೀದ್ ಶಾಂತಿ ಸಭೆ: ಈದ್ಗಾದಲ್ಲಿ ಸಾಮೂಹಿಕ ಪ್ರಾರ್ಥನೆಗೆ ನಿಷೇಧ

ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಮಂಗಳವಾರ ಸಂಜೆ ಹಮ್ಮಿಕೊಂಡಿದ್ದ ಬಕ್ರೀದ್ ಹಬ್ಬದ ಶಾಂತಿಪಾಲನಾ ಸಭೆಯಲ್ಲಿ ಅವರು ಮಾತನಾಡಿದರು. ಆಯಾ ಮಸೀದಿಗಳಲ್ಲಿ 50ಕ್ಕೂ ಹೆಚ್ಚು ಜನರಿಗೆ ಸೇರಲು ಅವಕಾಶ ಇರುವುದಿಲ್ಲ. ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯವಾಗಿ ಬಳಸಬೇಕು. ಪರಸ್ಪರ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. 60 ವರ್ಷ ಮೇಲ್ಪಟ್ಟ ವ್ಯಕ್ತಿಗಳು, 10 ವರ್ಷ ಒಳಗಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಮಾಡಬೇಕು. ಹಸ್ತಲಾಘವ ಮತ್ತು ಆಲಿಂಗನ ಮಾಡಬಾರದು. ಅಪರಿಚಿತರು ಪ್ರಾರ್ಥನೆ ಸಲ್ಲಿಸಲು ಬಂದರೆ ಅವರ ಬಗ್ಗೆ ವಿಶೇಷ ಗಮನ ಹರಿಸುವುದು ಸೇರಿದಂತೆ ಹಲವು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಶಾಂತಿಯುತವಾಗಿ, ಗದ್ದಲಕ್ಕೆ ಆಸ್ಪದ ಸಿಗದಂತೆ ಪ್ರಾರ್ಥನೆ ಮಾಡುವಂತೆ ಸೂಚಿಸಿದರು.

ಪುರಸಭೆ ಮಾಜಿ ಸದಸ್ಯ ಬಸವರಾಜ ನಂದಿಕೇಶ್ವರಮಠ ಮಾತನಾಡಿ, ಪಟ್ಟಣದಲ್ಲಿ ಹಿಂದೂ ಮುಸ್ಲಿಂ ಬಾಂಧವರು ಹಬ್ಬಗಳನ್ನು ಸೌಹಾರ್ದಯುತವಾಗಿ ಆಚರಿಸಿಕೊಂಡು ಬರುತ್ತಿದ್ದಾರೆ. ಈ ಬಾರಿ ಕೊರೊನಾ ಸಂಕಷ್ಟ ಸಮಯವಾಗಿದ್ದರಿಂದ ಸರ್ಕಾರದ ನಿರ್ದೇಶನಗಳನ್ನು ಪಾಲನೆ ಮಾಡುತ್ತಾ ಹಬ್ಬವನ್ನು ಆಚರಿಸಬೇಕಾಗಿದೆ. ಇಲ್ಲದಿದ್ದಲ್ಲಿ ಹಿಂದೂ ಮುಸ್ಲಿಂ ಬಾಂಧವರು ಜೊತೆಗೂಡಿಯೇ ಎಲ್ಲ ಹಬ್ಬಗಳನ್ನು ಆಚರಿಸಿಕೊಂಡು ಬರುವುದು ಸಂಪ್ರದಾಯ ಬೆಳೆದುಕೊಂಡು ಬಂದಿದೆ ಎಂದು ನೆನಪಿಸಿದರು.

ಸಭೆಯಲ್ಲಿ ಎಸ್​ಐ ಟಿ.ಜೆ.ನೆಲವಾಸಿ, ಅಂಜುಮನ್ ಇಸ್ಲಾಂ ಕಮಿಟಿ ಅಧ್ಯಕ್ಷ ಅಲ್ಲಾಭಕ್ಷ ನಾಯ್ಕೋಡಿ, ಪುರಸಭೆ ಸದಸ್ಯ ಮಹಬೂಬ್​ ಗೊಳಸಂಗಿ, ಎನ್.ಎಸ್.ಯು. ಐ ಜಿಲ್ಲಾ ಅಧ್ಯಕ್ಷ ಸದ್ದಾಂ ಕುಂಟೋಜಿ, ಯುವ ಕಾಂಗ್ರೆಸ್ ಅಧ್ಯಕ್ಷ ಮಹ್ಮದ್​ ರಫಿಕ್​​ ಶಿರೋಳ, ಜೆಡಿಎಸ್ ಜಿಲ್ಲಾ ಕಾರ್ಯದರ್ಶಿ ಅರವಿಂದ ಕಾಶೀನಕುಂಟಿ, ರಾಜಶೇಖರ ಹೊಳಿ, ರಾಜು ಬಳ್ಳೊಳ್ಳಿ, ಶೇಖರ ಢವಳಗಿ, ಮಹಾಂತೇಶ ಬೂದಿಹಾಳಮಠ ಸೇರಿದಂತೆ ಮತ್ತಿತರರು ಹಾಜರಿದ್ದರು.

Last Updated : Jul 29, 2020, 12:10 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.