ವಿಜಯಪುರ : ಬಂಧಿಯಾಗಿದ್ದ ಮಧ್ಯಪ್ರದೇಶದ ಕಾರ್ಮಿಕರನ್ನು ಭೀಮಾತೀರದ ಪೊಲೀಸರು ರಕ್ಷಣೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಗುಬ್ಬೇವಾಡ ಗ್ರಾಮದಲ್ಲಿ ನಡೆದಿದೆ.
ಗುಬ್ಬೇವಾಡ ಗ್ರಾಮದ ಜಮೀನು ಮಾಲೀಕ ಬಿರಾದಾರ್ ಹಾಗೂ ಮಧ್ಯಪ್ರದೇಶದ ರೋಹಿತ್ ಎಂಬುವ ಕಾರ್ಮಿಕರನ್ನು ಕಬ್ಬಿನ ಗದ್ದೆಯಲ್ಲಿ ಅಕ್ರಮವಾಗಿ ಬಂಧನದಲ್ಲಿ ಇಟ್ಟಿದ್ದರು.
ರಕ್ಷಣೆಗಾಗಿ ಮಧ್ಯಪ್ರದೇಶ ಜಿಲ್ಲಾಧಿಕಾರಿಯೋರ್ವರಿಗೆ ಕಾರ್ಮಿಕರು ಕರೆ ಮಾಡಿದ್ದಾರೆ. ನಂತರ ಮಧ್ಯಪ್ರದೇಶದ ಡಿಸಿ ವಿಜಯಪುರ ಎಸ್ಪಿ ಆನಂದ ಕುಮಾರ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಮಂಡ್ಯ ವಿದ್ಯಾರ್ಥಿನಿ ಮನೆಗೆ 'ಮಹಾ' ಕೈ ಶಾಸಕ ಭೇಟಿ: ಘೋಷಣೆ ಕೂಗಿದ್ದಕ್ಕೆ ಐಫೋನ್, ಸ್ಮಾರ್ಟ್‌ವಾಚ್ ಗಿಫ್ಟ್!
ಮಾಹಿತಿ ಆಧರಿಸಿ ಕಾರ್ಯಾಚರಣೆ ಕೈಗೊಂಡು, ಮಧ್ಯಪ್ರದೇಶದ 10 ಮಕ್ಕಳು ಸೇರಿ 35 ಕಾರ್ಮಿಕರಿಗೆ ಇಂಡಿ ಪೊಲೀಸರು ಮುಕ್ತಿ ನೀಡಿದ್ದಾರೆ. ಬಂಧನದಲ್ಲಿಟ್ಟ ಕಾರ್ಮಿಕರಿಂದ 100 ಟನ್ ಕಬ್ಬು ಕಟಾವು ಮಾಡಿಸಿದ್ದರು. 400 ಟನ್ ಕಬ್ಬು ಕಟಾವಿಗೆ ಬೆದರಿಕೆ ಹಾಕಿದ್ದರು. ಇದೀಗ ಕಾರ್ಮಿಕರನ್ನು ರಕ್ಷಿಸಿದ್ದು, ಇಲ್ಲಿಂದ ರೈಲು ಮೂಲಕ ಮಧ್ಯಪ್ರದೇಶಕ್ಕೆ ಕಳುಹಿಸಿಕೊಟ್ಟಿದ್ದಾರೆ.