ವಿಜಯಪುರ: ದಲಿತ ಯುವಕನ ಮೇಲೆ ಹಲ್ಲೆ ನಡೆಸಿದ ಪಿಎಸ್‌ಐ ವಿರುದ್ದ ಕ್ರಮಕ್ಕೆ ಮುಂದಾಗುವಂತೆ ಆಗ್ರಹಿಸಿ ಭೀಮ್ ಆರ್ಮಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಪಿಎಸ್‌ಐ ಕುಡಿದ ಅಮಲಿನಲ್ಲಿ ಮುದ್ದೇಬಿಹಾಳ ತಾಲೂಕಿನ ರಕ್ಕಸಗಿ ಗ್ರಾಮದ ದಲಿತ ಯುವಕ ಬಸಪ್ಪನ ಮೇಲೆ ಆಗಸ್ಟ್ 28 ರಂದು ಹಲ್ಲೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ಅಲ್ಲದೆ, ತಮ್ಮ ಸರ್ಕಾರಿ ಜವಾಬ್ದಾರಿ ಮರೆತು ದಲಿತ ಯುವಕನಿಗೆ ಜಾತಿನಿಂದನೆ ಮಾಡಿದ್ದಾರೆ ಎಂದು ಪ್ರತಿಭಟನಾಕಾರರು ಪಿಎಸ್‌ಐ ವಿರುದ್ಧ ಆಕ್ರೋಶ ಹೊರ ಹಾಕಿದರು.
ಇನ್ನೂ ಪದೇಪದೇ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ದಲಿತರಿಗೆ ರಕ್ಷಣೆ ಇಲ್ಲದಂತಾಗಿದೆ. ಜಿಲ್ಲಾಡಳಿತ ಇಂತಹ ಘಟನೆಗಳು ನಡೆಯದಂತೆ ಕ್ರಮಕ್ಕೆ ಮುಂದಾಗಬೇಕು ಜೊತೆಗೆ ಯುವಕನ ಮೇಲೆ ಹಲ್ಲೆ ಮಾಡಿದ ಪಿಎಸ್‌ಐ ಮೇಲೆ ಸೂಕ್ತ ಕ್ರಮಕ್ಕೆ ಮುಂದಾಗುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.