ವಿಜಯಪುರ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನ ಭಾವನೆಗಳಿಗೆ ಧಕ್ಕೆಯಾಗುವ ಯೋಜನೆಗಳನ್ನ ಜಾರಿ ಮಾಡಲು ಹೊರಟಿವೆ. ಅಲ್ಲದೆ ದೇಶದಲ್ಲಿ ಕೊರೊನಾ ವೈರಸ್ನಿಂದ ಜನರು ತತ್ತರಿಸ್ತಿದ್ರೆ, ಇತ್ತ ರಾಜ್ಯ ಸರ್ಕಾರ ರೈತರಿಗೆ ಮಾರಕವಾಗುವ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮಾಡಲು ಹೊರಟಿದೆ.
ಪಿಎಂ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಖಾಸಗೀಕರಣ ಮಾಡುತ್ತಿದೆ. ದೇಶದ ಯುವಕರಿಗೆ ಉದ್ಯೋಗಗಳನ್ನು ಸೃಷ್ಠಿ ಮಾಡುತ್ತೇವೆ ಎಂದು ಈ ಹಿಂದೆ ಆಶ್ವಾಸನೆ ನೀಡಿದ್ದರು. ಆದರೆ, ಕೇಂದ್ರದಲ್ಲಿ 2ನೇ ಬಾರಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೂ ಜನರಿಗೆ ನೀಡಿದ ಭರವಸೆಗಳನ್ನ ಈಡೇರಿಸುವ ಕಾರ್ಯಕ್ಕೆ ಮುಂದಾಗಿಲ್ಲ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.