ETV Bharat / state

ವಿದ್ಯಾರ್ಥಿ ಅನುಮಾನಾಸ್ಪದ ಸಾವು... ನ್ಯಾಯಕ್ಕಾಗಿ ಪೋಷಕರಿಂದ ಪ್ರತಿಭಟನೆ - undefined

ಶಾಲೆಗೆ ತೆರಳಿದ್ದ ವಿದ್ಯಾರ್ಥಿವೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬಸವನ ಬಾಗೇವಾಡಿಯಲ್ಲಿ ನಡೆದಿದೆ. ಇದಕ್ಕೆ ಶಾಲಾ ಆಡಳಿತ ಮಂಡಳಿ ನಿರ್ಲಕ್ಷವೇ ತಮ್ಮ ಮಗನ ಸಾವಿಗೆ ಕಾರಣ ಎಂದು ಪಾಲಕರು ಆರೋಪಿಸಿ, ಪ್ರತಿಭಟನೆ ನಡೆಸಿದ್ದಾರೆ.

ವಿದ್ಯಾರ್ಥಿ ಸಾವು.. ನ್ಯಾಯಕ್ಕಾಗಿ ಪೋಷಕರಿಂದ ಪ್ರತಿಭಟನೆ
author img

By

Published : Jul 7, 2019, 2:26 PM IST

ವಿಜಯಪುರ: ಸ್ನೇಹ ಸದನ ಖಾಸಗಿ ವಸತಿ ಶಾಲೆಯಲ್ಲಿ ಓದುತ್ತಿದ್ದ ಏಳನೇ ತರಗತಿ ವಿದ್ಯಾರ್ಥಿವೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಕಣಕಾಲ ಗ್ರಾಮದಲ್ಲಿ ನಡೆದಿದೆ.

ವಿದ್ಯಾರ್ಥಿ ಸಾವು.. ನ್ಯಾಯಕ್ಕಾಗಿ ಪೋಷಕರಿಂದ ಪ್ರತಿಭಟನೆ

ತಾಲೂಕಿನ ಸೂಳಕೋಡ ಗ್ರಾಮದ ಆಕಾಶ್​ ಕುಂಬಾರ(13) ಮೃತ ಬಾಲಕ. ನಿನ್ನೆ ಶಾಲೆಗೆ ಹೋಗಿದ್ದ ಆಕಾಶ್​ ಬೆಳಗ್ಗೆ ಅಸ್ವಸ್ಥನಾಗಿದ್ದ. ಆದರೆ ಶಾಲಾ ಆಡಳಿತ ಮಂಡಳಿಯವರು ಮಧ್ಯಾಹ್ನ ಬಾಲಕನ ಪಾಲಕರಿಗೆ ಕರೆ ಮಾಡಿ ನಿಮ್ಮ ಮಗನಿಗೆ ಹುಷಾರಿಲ್ಲ ಎಂದು ಮಾಹಿತಿ ನೀಡಿದ್ದರು. ಅವರು ಬಂದು ಮಗನನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಆತ ಸಾವನ್ನಪ್ಪಿದ್ದಾನೆ ಎಂದು ಮೃತನ ಕುಟುಂಬದವರು ಆರೋಪಿಸಿದ್ದಾರೆ.

ಅನುಮಾನಾಸ್ಪದವಾಗಿ ಮೃತಪಟ್ಟ ಬಾಲಕನ ಸಾವಿಗೆ ನ್ಯಾಯ ಬೇಕೆಂದು ಆಗ್ರಹಿಸಿ ಪೋಷಕರು ಬಸವನ ಬಾಗೇವಾಡಿ ಪೊಲೀಸ್ ಠಾಣೆ ಎದುರು ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಶಾಲಾ ಆಡಳಿತ ಮಂಡಳಿ ನಿರ್ಲಕ್ಷವೇ ತಮ್ಮ ಮಗನ ಸಾವಿಗೆ ಕಾರಣವೆಂದು ಪಾಲಕರು ಆರೋಪಿಸುತ್ತಿದ್ದಾರೆ. ಖಾಸಗಿ ಶಾಲಾ ಆಡಳಿತ ಮಂಡಳಿ ಮುಖ್ಯಸ್ಥರನ್ನು ಬಂಧಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಬಿಇಒ ಮಂಜುನಾಥ್​ ಗುಳೇದಗುಡ್ಡ ಅವರು ಶಾಲಾ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆದುಕೊಳ್ಳಲಾಗಿದೆ.

Intro:ವಿಜಯಪುರ: ಸ್ನೇಹ ಸದನ ಖಾಸಗಿ ವಸತಿ ಶಾಲೆಯಲ್ಲಿ ಓದುತ್ತಿದ್ದ ಏಳನೇ ತರಗತಿ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಕಣಕಾಲ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಸೂಳಕೋಡ ಗ್ರಾಮದ ಆಕಾಶ ಕುಂಬಾರ(13) ಮೃತ ಬಾಲಕನಾಗಿದ್ದಾನೆ.‌
ನಿನ್ನೆ ಶಾಲೆಗೆ ಹೋಗಿದ್ದ ಆಕಾಶ ಬೆಳಗ್ಗೆ ಅಸ್ವಸ್ಥ ನಾಗಿದ್ಧನು. ಆದರೆ ಶಾಲೆ ಆಡಳಿತ ಮಂಡಳಿ ಮಧ್ಯಾಹ್ನ ಅವರ ಪಾಲಕರಿಗೆ ಕರೆ ಮಾಡಿ ನಿಮ್ಮ ಮಗನಿಗೆ ಹುಷಾರಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಅವರು ಬಂದು ಮಗನನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಮಗ ಸಾವನ್ನಪ್ಪಿದ್ದಾನೆ ಎಂದು ಮೃತನ ಕುಟುಂಬದವರು ಆರೋಪಿಸಿದ್ದಾರೆ.
ಅನುಮಾನಾಸ್ಪದವಾಗಿ ಮೃತಪಟ್ಟ ಬಾಲಕನ ಸಾವಿಗೆ ನ್ಯಾಯ ಬೇಕು ಎಂದು ಆಗ್ರಹಿಸಿ ಪೋಷಕರು ಬಸವನ ಬಾಗೇವಾಡಿ ಪೊಲೀಸ್ ಠಾಣೆ ಎದುರು ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಶಾಲಾ ಆಡಳಿತ ಮಂಡಳಿ ನಿರ್ಲಕ್ಷವೇ ತಮ್ಮ ಮಗನ ಸಾವಿಗೆ ಕಾರಣ ಎಂದು ಪಾಲಕರು ಆರೋಪಿಸುತ್ತಿದ್ದಾರೆ. ಖಾಸಗಿ ಶಾಲಾ ಆಡಳಿತ ಮಂಡಳಿ ಮುಖ್ಯಸ್ಥರನ್ನು ಬಂಧಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.
ಸ್ಥಳಕ್ಕೆ ಆಗಮಿಸಿದ ಬಿಇಒ ಮಂಜುನಾಥ ಗುಳೇದಗುಡ್ಡ ಶಾಲೆ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂದಕ್ಕೆ ಪಡೆದುಕೊಳ್ಖಲಾಯಿತು.Body:ವಿಜಯಪುರ Conclusion:ವಿಜಯಪುರ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.