ವಿಜಯಪುರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಾಸಿಸ್ಟರ ಸಂಘ ಜಿಲ್ಲಾ ಘಟಕದಿಂದ ನಗರದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಮುಂಭಾದಲ್ಲಿ ಕೈಗೆ ಕಪ್ಪು ಪಟ್ಟಿ ಧರಿಸುವ ಮೂಲಕ ಪ್ರತಿಭಟನೆ ನಡೆಸಿದರು. ಕಳೆದ ಹಲವು ವರ್ಷಗಳಿಂದ ಸರ್ಕಾರ ಫಾರ್ಮಾಸಿಸ್ಟರ ಅಭಿವೃದ್ಧಿಗೆ ಯಾವುದೇ ಯೋಜನಗಳನ್ನು ಜಾರಿಗೆ ತಂದಿಲ್ಲ. ಹಾಗೂ ವೇತನ ಹೆಚ್ಚಿಸಿಲ್ಲ. 2500 ಕ್ಕೂ ಅಧಿಕ ಫಾರ್ಮಾಸಿಸ್ಟಗಳು ರಾಜ್ಯ ಸರ್ಕಾರದ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ಮಹಿಸುತ್ತಿದ್ದಾರೆ. ನೇಮಕಾತಿ ಬದಲಿಸಲು ಹಲವು ಬಾರಿ ಮನವಿ ಸಲ್ಲಿಸಿದರೂ ಸರ್ಕಾರ ಕ್ರಮ ಕೈಗೊಂಡಿಲ್ಲ. 1998 ರ ಫಾರ್ಮಾಸಿ ಕಾಯಿದೆಯಂತೆ ಫಾರ್ಮಸಿ ಡಿಪ್ಲೊಮಾ ಹಾಗೂ ಪದವೀಧರರು ಮಾತ್ರ ಕಾರ್ಯ ನಿರ್ವಹಿಸಲು ಅವಾಕಾಶ ನೀಡಬೇಕು ಎಂದು ಆಗ್ರಹಿಸಿದರು. ಅಲ್ಲದೇ ಸೇವಾ ಭದ್ರತೆ ಒದಗಿಸಿ ಇತರ ಭತ್ಯೆಗಳನ್ನು ಹೆಚ್ಚಿಸುವಂತೆ ಕೋರಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾಕ್ಕೆ ಮನವಿ ಸಲ್ಲಿಸಿಲಾಯಿತು.