ವಿಜಯಪುರ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಜಮಾಯಿಸಿದ ವಿವಿಧ ಸಂಘಟನೆಗಳ ಸದಸ್ಯರು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಕಡಿಮೆ ಇದ್ದರೂ ದೇಶದಲ್ಲಿ ಮಾತ್ರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಪರಿಣಾಮ ಬಡವರಿಗೆ ಪೆಟ್ರೋಲ್ ಖರೀದಿಸಲು ಸಾಧ್ಯವಾಗುತ್ತಿಲ್ಲ. ಲಾಕ್ಡೌನ್ನಿಂದ ಜನ ಈಗಾಗಲೇ ತತ್ತರಿಸಿದ್ದಾರೆ. ಈ ಸಂದರ್ಭದಲ್ಲೂ ಸರ್ಕಾರ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಮಾಡಿ ಇನ್ನೂ ಸಂಕಷ್ಟಕ್ಕೆ ತಳ್ಳುತ್ತಿದೆ ಎಂದು ದೂರಿದರು.
ಅಂತಾರಾಷ್ಟ್ರೀಯ ಮಾರುಕಟ್ಟೆಯ ಬೆಲೆಗೆ ಅನುಗುಣವಾಗಿ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.