ವಿಜಯಪುರ: ಮುಳವಾಡ ಏತ ನೀರಾವರಿ ಕಾಲುವೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ರೈತ ಸಂಘದಿಂದ ಪ್ರತಿಭಟನಾ ರ್ಯಾಲಿ ನಡೆಯಿತು.
ನಗರದ ಸಿದ್ದೇಶ್ವರ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿವರಿಗೆ ರ್ಯಾಲಿ ನಡೆಸಿದ ರೈತರು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಮುಳುವಾಡ ಏತ ನೀರಾವರಿ ಕಾಲುವೆಗಳಿಗೆ ನೀರು ಹರಿಸುವುದರಿಂದ ಬಸವನ ಬಾಗೇವಾಡಿ, ಮುದ್ದೇಬಿಹಾಳ ವಿಜಯಪುರ ತಾಲೂಕಿನ ರೈತರ ಜಮೀನಿಗೆ ನೀರಾವರಿ ಸೌಲಭ್ಯ ದೊರಕಲಿದೆ. ನೀರಾವರಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜಿಲ್ಲೆಯಲ್ಲಿ ಕಾಲುವೆಗಳಿಗೆ ನೀರು ಹರಿಸುತ್ತಿಲ್ಲ. ಇದರಿಂದ ಜಾನುವಾರುಗಳಿಗೆ ಕುಡಿಯಲು ಹಾಗೂ ಬೆಳೆಗಳಿಗೆ ನೀರಿನ ಕೊರತೆ ಉಂಟಾಗಿದೆ ಆದ್ದರಿಂದ ಆದಷ್ಟು ಬೇಗ ಕಾಲುವೆಗಳಿಗೆ ನೀರು ಹರಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.