ವಿಜಯಪುರ: ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗ ವರದಿ ಜಾರಿ ಹಾಗೂ ದಲಿತ ಮಹಿಳೆ, ಮುಖಂಡರ ಮೇಲೆ ಹಲ್ಲೆ ಖಂಡಿಸಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನೆ ನಡೆಸಿದ ಅವರು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಸರ್ಕಾರ ತಕ್ಷಣವೇ ಸದಾಶಿವ ಆಯೋಗ ವರದಿ ಜಾರಿ ಮಾಡಬೇಕು. ಜಿಲ್ಲೆಯ ಹಲವು ಭಾಗಗಳಲ್ಲಿ ದಲಿತರ ಮೇಲೆ ಶೋಷಣೆ, ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಅಲ್ಲದೆ ದಲಿತರ ಮೇಲೆ ಸರ್ಕಾರಿ ಅಧಿಕಾರಿ ದರ್ಪ ಹೆಚ್ಚಾಗಿದ್ದು ನಿರ್ಬಂಧ ಹೇರುವಂತೆ ಪ್ರತಿಭಟನಾಕಾರು ಒತ್ತಾಯಿಸಿದರು. ಜನಾಂಗಕ್ಕೆ ಸರ್ಕಾರದಿಂದ ಬರುವ ಅನುದಾನದ ಸದ್ಬಳಕೆಗೆ ಜಿಲ್ಲಾಧಿಕಾರಿ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರು ಆಗ್ರಹಿಸಿದರು.
ಇನ್ನು ದಲಿತ ಜನಾಂಗಕ್ಕೆ ಜಿಲ್ಲೆಯಲ್ಲಿ ರುದ್ರಭೂಮಿ ಮಂಜೂರು ಹಾಗೂ ತಕ್ಷಣವೇ ನ್ಯಾಯಮೂರ್ತಿ ಸದಾಶಿವ ವರದಿ ಜಾರಿ ಮಾಡುವಂತೆ ಹಾಗೂ ಇತರ ಬೇಡಿಕೆ ಈಡೇರಿಕೆ ಒತ್ತಾಯಿಸಿ ಪ್ರತಿಭಟನಾಕಾರು ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.