ETV Bharat / state

ಉತ್ತರಪ್ರದೇಶದಲ್ಲಿ ಅತ್ಯಾಚಾರ ಪ್ರಕರಣ.. ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಪ್ರತಿಭಟನೆ - uttar pradesh rape case updates

ಅಧಿಕಾರಿಗಳು ಎಚ್ಚೆತ್ತು ಮಹಿಳೆಯರಿಗೆ ರಕ್ಷಣೆ ನೀಡಲು ಮುಂದಾಗಬೇಕು. ಅತ್ಯಾಚಾರಕ್ಕೊಳಗಾದ ಯುವತಿಯ ಕುಟುಂಬಕ್ಕೆ ₹1 ಕೋಟಿ ಪರಿಹಾರ ನೀಡಬೇಕು‌..

protest in vijaypur against uttar pradesh rape case
ಪ್ರತಿಭಟನೆ
author img

By

Published : Sep 30, 2020, 4:21 PM IST

ವಿಜಯಪುರ : ಉತ್ತರಪ್ರದೇಶದಲ್ಲಿ ಯುವತಿ ಮೇಲೆ ಅತ್ಯಾಚಾರವೆಸಗಿದ ಆರೋಪಿಗಳಿಗೆ ತಕ್ಕ ಶಿಕ್ಷೆ ನೀಡುವಂತೆ ಒತ್ತಾಯಿಸಿ ನಗರದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನ ನಡೆಸಿವೆ.

ಕಾಮುಕರ ವಿರುದ್ಧ ಎಐಡಿಎಸ್‌ಒ ಪ್ರತಿಭಟನೆ

ಸೆ.14ರಂದು ಉತ್ತರಪ್ರದೇಶದ ಹತ್ರಾಸ್​ನಲ್ಲಿ ಓರ್ವ ದಲಿತ ಯುವತಿಯ ಮೇಲೆ ನಾಲ್ವರು ಕಾಮುಕರು ಅತ್ಯಾಚಾರ‌‌ವೆಸಗಿ, ಚಿತ್ರಹಿಂಸೆ ಮಾಡಿರುವುದನ್ಜು ಖಂಡಿಸಿ ಎಐಡಿಎಸ್​ಒ(All India Democratic Students Organisation)ಸಂಘಟನೆ ಹಾಗೂ ಭೀಮ‌ ಆರ್ಮಿ ಸಂಘಟನೆ ಕಾರ್ಯಕರ್ತರು ಪ್ರತಿಭಟಿಸಿದರು. ಉತ್ತರಪ್ರದೇಶದಲ್ಲಿ ಹೆಣ್ಣು ಮಕ್ಕಳು ಮನೆಯಿಂದ ಹೊರ ಬರಲು ಹೆದರಿಕೊಳ್ಳುವ ವಾತಾವರಣ ನಿರ್ಮಾಣವಾಗಿದೆ.

ಹೀಗಾಗಿ ಈ ಹೀನ ಕೃತ್ಯ ವೆಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗುವಂತೆ ಆಗ್ರಹಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಉತ್ತರಪ್ರದೇಶ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ರು. ಉತ್ತರಪ್ರದೇಶ ರಾಜ್ಯದಲ್ಲಿ ಅತ್ಯಾಚಾರ ಪ್ರಕರಣ ಹೆಚ್ಚಳವಾಗಿವೆ.

ಅಧಿಕಾರಿಗಳು ಎಚ್ಚೆತ್ತು ಮಹಿಳೆಯರಿಗೆ ರಕ್ಷಣೆ ನೀಡಲು ಮುಂದಾಗಬೇಕು. ಅತ್ಯಾಚಾರಕ್ಕೊಳಗಾದ ಯುವತಿಯ ಕುಟುಂಬಕ್ಕೆ ₹1 ಕೋಟಿ ಪರಿಹಾರ ನೀಡಬೇಕು‌. ಕಾಮುಕರಿಗೆ ಗಲ್ಲು ಶಿಕ್ಷೆ ವಿಧಿಸುವ ಮೂಲಕ ಆ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಪ್ರತಿಭಟನಾಕಾರು ಜಿಲ್ಲಾಧಿಕಾರಿ ಮೂಲಕ ರಾಜ್ಯ ಗೃಹ ಮಂತ್ರಿಗೆ ಮನವಿ ಸಲ್ಲಿಸಿದ್ರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.