ETV Bharat / state

ಕೇಂದ್ರ- ರಾಜ್ಯ ಸರ್ಕಾರಗಳು ಖಾಲಿ ಹುದ್ದೆ ಭರ್ತಿ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ - ಖಾಲಿ ಹುದ್ದೆ ಭರ್ತಿ ಮಾಡುವಂತೆ ವಿಜಯಪುರದಲ್ಲಿ ಪ್ರತಿಭಟನೆ

ಸರ್ಕಾರ ಹುದ್ದೆಗಳ ಭರ್ತಿಗೆ ಮುಂದಾಗದಿದ್ದರಿಂದ ಯುವ ಸಮೂಹಕ್ಕೆ ಅನ್ಯಾಯವಾಗುತ್ತಿದೆ. ಅನೇಕ ಯುವಕ-ಯುವತಿಯರು ಉದ್ಯೋಗವಿಲ್ಲದೆ ವಿದ್ಯಾಭ್ಯಾಸಕ್ಕೆ ಮಾಡಿದ ಸಾಲ ಮರು ಪಾವತಿಸಲು ಹೆಣಗಾಡುವಂತಾಗಿದೆ..

Protest in Vijaypur  to demanding filling of vacancies
ಖಾಲಿ ಹುದ್ದೆ ಭರ್ತಿ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ
author img

By

Published : Sep 15, 2020, 5:09 PM IST

ವಿಜಯಪುರ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಖಾಲಿ ಹುದ್ದೆ ಭರ್ತಿ ಮಾಡುವಂತೆ ಒತ್ತಾಯಿಸಿ ಮಾನವ ಹಕ್ಕುಗಳ ಕಲ್ಯಾಣ ಮಂಡಳಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು‌.

ದೇಶದಲ್ಲಿ ವಿದ್ಯಾವಂತ ನಿರುದ್ಯೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಅನೇಕ ವಿದ್ಯಾವಂತರು ಕೆಲಸಕ್ಕಾಗಿ ಪರದಾಟ ನಡೆಸುತ್ತಿದ್ದಾರೆ. ಆದರೆ, ಸರ್ಕಾರ ಮಾತ್ರ ಖಾಲಿ ಹುದ್ದೆಗಳ ಭರ್ತಿಗೆ ಮುಂದಾಗುತ್ತಿಲ್ಲ. ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 3.50 ಕೋಟಿ ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2.40 ಲಕ್ಷ ಹುದ್ದೆಗಳು ಖಾಲಿ ಇವೆ.

ಸರ್ಕಾರ ಹುದ್ದೆಗಳ ಭರ್ತಿಗೆ ಮುಂದಾಗದಿದ್ದರಿಂದ ಯುವ ಸಮೂಹಕ್ಕೆ ಅನ್ಯಾಯವಾಗುತ್ತಿದೆ. ಅನೇಕ ಯುವಕ/ಯುವತಿಯರು ಉದ್ಯೋಗವಿಲ್ಲದೆ ವಿದ್ಯಾಭ್ಯಾಸಕ್ಕೆ ಮಾಡಿದ ಸಾಲ ಮರು ಪಾವತಿಸಲು ಹೆಣಗಾಡುವಂತಾಗಿದೆ ಎಂದು ಮಾನವ ಹಕ್ಕುಗಳ ಕಲ್ಯಾಣ ಮಂಡಳಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಖಾಲಿ ಹುದ್ದೆ ಭರ್ತಿ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ

ಸರ್ಕಾರ ಅಂಕ ಪ್ರಮಾಣ ಹಾಗೂ ರೋಸ್ಟರ್ ಪದ್ಧತಿ ಮಾನದಂಡ ಆಧಾರಿತವಾಗಿ ಖಾಲಿ ಹುದ್ದೆಗಳ ಭರ್ತಿಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.