ETV Bharat / state

ಪಿಎಸ್‌ಐ ನೇಮಕಾತಿ ಅಕ್ರಮ : ಸಾಮಾಜಿಕ ಜಾಲತಾಣದಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿಗಳ ನಿಂದನೆ! - PSI recruitment scam

ಕೂಡಲೇ ಸಿಐಡಿ ತನಿಖೆ ಪೂರ್ಣಗೊಳಿಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಿ ಪ್ರಾಮಾಣಿಕವಾಗಿ ಪಿಎಸ್​ಐ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಬೇಕು ಎಂದು ಪಿಎಸ್​ಐ ಹುದ್ದೆಯ ಆಕಾಂಕ್ಷಿ ಅಭ್ಯರ್ಥಿಗಳು ಮನವಿ ಮಾಡಿದ್ದಾರೆ..

PSI Post aspirants reacts on PSI recruitment scam
ಪಿಎಸ್‌ಐ ನೇಮಕಾತಿ ಅಕ್ರಮ ಕುರಿತು ಅಭ್ಯರ್ಥಿಗಳ ಪ್ರತಿಕ್ರಿಯೆ
author img

By

Published : Apr 17, 2022, 5:51 PM IST

ವಿಜಯಪುರ : ಇತ್ತೀಚಿಗೆ ನಡೆದ ಪಿಎಸ್​ಐ ನೇಮಕಾತಿಯಲ್ಲಿ‌ ಕೆಲವರು ಅಕ್ರಮ ನಡೆಸಿರಬೇಕು. ಈ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದ್ದರೂ ಸಹ ಪ್ರಾಮಾಣಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸವನ್ನು ಕೆಲವರು ಸಾಮಾಜಿಕ ತಾಣಗಳ ಮೂಲಕ ಮಾಡುತ್ತಿದ್ದಾರೆ. ಇದು ಆಯ್ಕೆಯಾಗಿರುವ ಅಭ್ಯರ್ಥಿಗಳ ಮನೋಬಲ‌ ಕುಗ್ಗಿಸುವಂತಾಗಿದೆ ಎಂದು ಪಿಎಸ್​ಐ ನೇಮಕಾತಿಯಲ್ಲಿ ಆಯ್ಕೆಯಾದ ವಿಜಯಪುರ ಜಿಲ್ಲೆಯ ಅಭ್ಯರ್ಥಿಗಳು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಪಿಎಸ್‌ಐ ನೇಮಕಾತಿ ಅಕ್ರಮ ಕುರಿತು ಅಭ್ಯರ್ಥಿಗಳ ಪ್ರತಿಕ್ರಿಯೆ ಹೀಗಿದೆ..

ನಗರದಲ್ಲಿ ಕೆಲ ಅಭ್ಯರ್ಥಿಗಳು ಮಾತನಾಡಿ, ನಿತ್ಯ ನಮಗೆ ಮಾನಸಿಕ‌ ಹಿಂಸೆಯಾಗುತ್ತಿದೆ. ಸ್ಕ್ಯಾಮ್ ಪಿಎಸ್​ಐ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಅಕೌಂಟ್ ತೆರೆದು ನಮ್ಮ ಕುಟುಂಬ ವರ್ಗದವರ ಚಾರಿತ್ರ್ಯ ವಧೆ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳ ಫೋಟೋ ಹಾಕಿ ಲಕ್ಷಾಂತರ ರೂ. ಹಣ ನೀಡಿ ಹುದ್ದೆ ಗಿಟ್ಟಿಸಿಕೊಂಡಿದ್ದಾರೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ.

ಒಟ್ಟು 542 ಅಭ್ಯರ್ಥಿಗಳು ಪಿಎಸ್​ಐ ಹುದ್ದೆಗೆ ಅಂತಿಮವಾಗಿ ಆಯ್ಕೆಯಾಗಿದ್ದೇವೆ. ಆದರೆ, ಕೆಲವರು ಪರೀಕ್ಷೆಯಲ್ಲಿ ಅಕ್ರಮ ನಡೆಸಿ ಉಳಿದ ಅಭ್ಯರ್ಥಿಗಳ ಭವಿಷ್ಯದ ಜೊತೆ ಆಟವಾಡುತ್ತಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪಿಎಸ್‌ಐ ನೇಮಕಾತಿ ಅಕ್ರಮ: ಗೃಹ ಸಚಿವರ ರಾಜೀನಾಮೆಗೆ ಪ್ರಿಯಾಂಕ್ ಖರ್ಗೆ ಆಗ್ರಹ

ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ. ಕೂಡಲೇ ಸಿಐಡಿ ತನಿಖೆ ಪೂರ್ಣಗೊಳಿಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಿ ಪ್ರಾಮಾಣಿಕವಾಗಿ ಪಿಎಸ್​ಐ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಬೇಕು ಎಂದು ಪಿಎಸ್​ಐ ಹುದ್ದೆಯ ಆಕಾಂಕ್ಷಿ ಅಭ್ಯರ್ಥಿಗಳು ಮನವಿ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.