ETV Bharat / state

PSI ಅಕ್ರಮ ನೇಮಕಾತಿ: ಬಿಜೆಪಿ ಸರ್ಕಾರದ ವಿರುದ್ಧ ಪ್ರಧಾನಿಗೆ ದೂರು ನೀಡಿದ ಯತ್ನಾಳ್​​ ಆಪ್ತ

author img

By

Published : Apr 30, 2022, 12:20 PM IST

PSI recruitment scam: ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಯತ್ನಾಳ್​​ ಬೆಂಬಲಿಗ ರಾಘವ ಅಣ್ಣಿಗೇರಿ ಎಂಬುವವರು ಪತ್ರದ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ.

Annigeri wrote letter to PM Modi
ರಾಘವ ಅಣ್ಣಿಗೇರಿ, ನರೇಂದ್ರ ಮೋದಿ

ವಿಜಯಪುರ: ರಾಜ್ಯದಲ್ಲಿ ಪಿಎಸ್​​ಐ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್​​ ಅವರ ಬೆಂಬಲಿಗನೊಬ್ಬ ಪ್ರಧಾನಮಂತ್ರಿ ನರೇಂದ್ರ ಮೋದಿಯ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯ ಸರ್ಕಾರ ಭ್ರಷ್ಟ ಸರ್ಕಾರವಾಗಿದ್ದು, ಪೊಲೀಸ್ ಇಲಾಖೆ ಅಲ್ಲದೇ, ಬೇರೆ ಇಲಾಖೆಯಲ್ಲೂ ಅಕ್ರಮ ನಡೆದಿದೆ. ಪಿಎಸ್​​​ಐ ಪರೀಕ್ಷೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಯತ್ನಾಳ್​​ ಬೆಂಬಲಿಗ ರಾಘವ ಅಣ್ಣಿಗೇರಿ ಎಂಬುವವರು ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್​​ ಆಪ್ತ ರಾಘವ ಅಣ್ಣಿಗೇರಿ..

ಕಳೆದ ವಾರವಷ್ಟೇ ಈ ಪ್ರಕರಣದ ಆರೋಪಿ ದಿವ್ಯಾ ಅವರಿಗೆ ಮಾಜಿ ಸಿಎಂ‌‌ ಬೆಂಬಲ‌‌ ಇದೆ ಎಂದು ಯತ್ನಾಳ್​​ ಆರೋಪಿಸಿದ್ದರು.‌ ಇದೀಗ ಶಾಸಕ ಬಸನಗೌಡ ಪಾಟೀಲ ಯತ್ನಾಳ್​​ ಅವರ ಕಟ್ಟಾ ಆಪ್ತರಿಂದಲೇ ಪ್ರಧಾನಿ ಕಚೇರಿಗೆ ದೂರು ನೀಡಿರುವುದು ಅಚ್ಚರಿ ಮೂಡಿಸಿದೆ. ಪರೋಕ್ಷವಾಗಿ ಪ್ರಕರಣದಲ್ಲಿ ಇನ್ನೂ ದೊಡ್ಡವರ ಕೈವಾಡ ಇದೆ ಎಂದ ಯತ್ನಾಳ್​​ ಆಪ್ತ ಪ್ರಧಾನಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: PSI ಅಕ್ರಮ ನೇಮಕಾತಿ ಆರೋಪ ಎದುರಿಸುತ್ತಿರುವ ದಿವ್ಯಾ ಮಾಜಿ ಸಿಎಂ ಆಪ್ತೆ: ಯತ್ನಾಳ್

ರಾಜ್ಯದಲ್ಲಿ ಭ್ರಷ್ಟ ಸರ್ಕಾರವಿದ್ದು, ಜನರು ರೋಸಿ ಹೋಗಿದ್ದಾರೆ. ಪೊಲೀಸ್ ಇಲಾಖೆ ಮಾತ್ರವಲ್ಲದೇ, ಲೋಕೋಪಯೋಗಿ ಹಾಗೂ ನೀರಾವರಿ ಇಲಾಖೆಯಲ್ಲೂ ಭ್ರಷ್ಟಾಚಾರ ನಡೆದಿದೆ. ಈ ಬಗ್ಗೆ ಹಲವು ದೂರುಗಳು ಕೇಳಿ ಬಂದಿವೆ. ಹೀಗಾಗಿ ಇವುಗಳ ಬಗ್ಗೆಯೂ ತನಿಖೆ ಮಾಡಬೇಕು. ಸಿಐಡಿ ತನಿಖೆಯಿಂದ ಪ್ರಕರಣದ ಪ್ರಮುಖ ಆರೋಪಿಯನ್ನು ಹಿಡಿಯಲು ಸಾಧ್ಯವಿಲ್ಲ.‌ ಹೀಗಾಗಿ ಸಿಬಿಐಗೆ ನೀಡಬೇಕು ಎಂದು ಪ್ರಧಾನಿ‌ ಕಚೇರಿಗೆ ಸಲ್ಲಿಸಿದ ದೂರಿನಲ್ಲಿ ರಾಘವ ಅಣ್ಣಿಗೇರಿ ಉಲ್ಲೇಖಿಸಿದ್ದಾರೆ.

Annigeri wrote letter to PM Modi
ಬಿಜೆಪಿ ಸರ್ಕಾರದ ವಿರುದ್ಧ ಪ್ರಧಾನಿಗೆ ದೂರು ನೀಡಿದ ಯತ್ನಾಳ್​​ ಆಪ್ತ

ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಬಂಧನದ ಬಳಿಕವೇ ಪ್ರಧಾನಿ ಕಚೇರಿಗೆ ದೂರು ನೀಡಿರುವುದು ಕೂತೂಹಲಕ್ಕೆ ಕಾರಣವಾಗಿದೆ. ಬಿಜೆಪಿ ಸರ್ಕಾರದ ವಿರುದ್ಧವೇ ಬಿಜೆಪಿ ಮುಖಂಡರೊಬ್ಬರ ಆಪ್ತ ದೂರು ನೀಡಿರುವುದು ಪ್ರಕರಣದ ಹೊಸ ತಿರುವಿಗೆ ಕಾರಣವಾಗುವ ಸಾಧ್ಯತೆ ಇದೆ. ಇದರ ಜತೆ ಇಡಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ದೂರು ನೀಡಿರುವುದು ಸಹ ಅಚ್ಚರಿ ಮೂಡಿಸಿದೆ. ಆನಲೈನ್ ಮೂಲಕ ರಾಘವ ಅಣ್ಣಿಗೇರಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಪಿಎಸ್ಐ ನೇಮಕಾತಿ ಪರೀಕ್ಷಾಅಕ್ರಮ: ಪ್ರಕರಣದ ಕಿಂಗ್‌ಪಿನ್ 18 ದಿನಗಳ ಪಯಣ ಹೇಗಿತ್ತು ಗೊತ್ತಾ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.