ವಿಜಯಪುರ: ರೈತ ದಂಪತಿಯ ಮಗ ಜಿಲ್ಲೆಗೆ ಪ್ರಥಮ ಹಾಗೂ ರಾಜ್ಯಕ್ಕೆ ಕಲಾ ವಿಭಾಗದಲ್ಲಿ 9ನೇ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾನೆ.
ಮಾಳಪ್ಪ ನಿಂಗಪ್ಪ ಹೊಸಮನಿ ಸಾಧನೆ ಮಾಡಿದ ವಿದ್ಯಾರ್ಥಿ. ವಿಜಯಪುರ ಜಿಲ್ಲೆ ಸಿಂದಗಿ ಜ್ಞಾನಭಾರತಿ ಪಿಯು ಕಾಲೇಜಿನ ವಿದ್ಯಾರ್ಥಿ ಮಾಳಪ್ಪ ಹೊಸಮನಿ ಶೇ.97.66 ಅಂಕ ಗಳಿಸಿ ಗಮನ ಸೆಳೆದಿದ್ದಾನೆ.
ಕಲಬುರಗಿ ಜಿಲ್ಲೆಯ ಯಾತನೂರ ಮೂಲದ ವಿದ್ಯಾರ್ಥಿ ಮಾಳಪ್ಪ ಹೊಸಮನಿ ಸಿಂದಗಿಯಲ್ಲಿ ಬಾಡಿಗೆ ಕೋಣೆಯಲ್ಲಿದ್ದುಕೊಂಡು ವಿದ್ಯಾಭ್ಯಾಸ ಮಾಡಿ ಈ ಸಾಧನೆ ಮಾಡಿದ್ದಾನೆ. ತನ್ನ ಸಾಧನೆಯ ಬಗ್ಗೆ ಸಂತಸ ಹಂಚಿಕೊಂಡಿರುವ ವಿದ್ಯಾರ್ಥಿ, ತಂದೆ-ತಾಯಿ ಪರಿಶ್ರಮದಿಂದ ಈ ಸಾಧನೆ ಮಾಡಲು ಸಾಧ್ಯವಾಯಿತು ಎಂದು ತನ್ನ ಮನದಾಳದ ಮಾತನ್ನು ಹಂಚಿಕೊಂಡಿದ್ದಾನೆ.