ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಲಾಕ್ಡೌನ್ ಬೆನ್ನಲ್ಲೇ, ಪೊಲೀಸರು ವಾಹನ ತಪಾಸಣೆ ನಡೆಸುವ ವೇಳೆ ಕಾರಿನಲ್ಲಿ ಮದ್ಯದ ಬಾಟಲ್ಗಳು ಪತ್ತೆಯಾಗಿವೆ.
ನಗರದ ಗಾಂಧಿ ವೃತ್ತದಲ್ಲಿ ಪೊಲೀಸರು ಕಾರು ತಪಾಸಣೆ ನಡೆಸಿದಾಗ, ಬೆಂಗಳೂರಿನಿಂದ ವಿಜಯಪುರಕ್ಕೆ ಆಗಮಿಸಿದ ಯುವಕರ ಕಾರಿನಲ್ಲಿ ಮದ್ಯದ ಬಾಟಲ್ಗಳು ಪತ್ತೆಯಾಗಿವೆ. ತಕ್ಷಣವೇ ಕಾರಿನಲ್ಲಿದ್ದ ಮೂವರನ್ನ ಪೊಲೀಸರು ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಸದ್ಯ, ಕಾರು ಹಾಗೂ ಯುವಕರನ್ನ ಗಾಂಧಿ ಚೌಕ್ ಪೊಲೀಸ್ ಠಾಣೆ ಪೊಲೀಸರು ವಶಕ್ಕೆ ಪಡೆಕೊಂಡಿದ್ದು, ಯುವಕರನ್ನು ವಿಚಾರಣೆ ನಡೆಸುತ್ತಿದ್ದಾರೆ.