ETV Bharat / state

ಕಾಂಗ್ರೆಸ್ ಅಭ್ಯರ್ಥಿ ಅಶೋಕ್​ ಮನಗೂಳಿ ಪರ ರಾಜು ತಾಳಿಕೋಟೆ ಮತಬೇಟೆ - actor Raju Talikote news

ಕಾಂಗ್ರೆಸ್ ಅಭ್ಯರ್ಥಿ ಅಶೋಕ್​ ಮನಗೂಳಿ ಪರ ಹಾಸ್ಯ ನಟ ರಾಜು ತಾಳಿಕೋಟೆ ಸಿಂದಗಿಯಲ್ಲಿ ಮತಯಾಚನೆ ಮಾಡಿದರು.

Raju Talikote
ಸಿಂಧಗಿಯಲ್ಲಿ ಕಾಂಗ್ರೆಸ್ ಪರ ಭರ್ಜರಿ ಪ್ರಚಾರ ನಡೆಸಿದ ರಾಜು ತಾಳಿಕೋಟೆ​
author img

By

Published : Oct 17, 2021, 7:37 AM IST

ವಿಜಯಪುರ: ಸಿಂದಗಿ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್​ ಮನಗೂಳಿ ಪರ ಹಾಸ್ಯ ನಟ ರಾಜು ತಾಳಿಕೋಟೆ ಭರ್ಜರಿ ಪ್ರಚಾರ ಮಾಡಿದರು.

ಸಿಂಧಗಿ ಪಟ್ಟಣದ ಮಾಂಗಲ್ಯ ಕಲ್ಯಾಣ ಮಂಟಪದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮತಯಾಚನೆ ಮಾಡಿ ಬಳಿಕ ಮಾತನಾಡಿದ ಅವರು, 'ನೀವು ಬಿಜೆಪಿಗೆ ಮತ ಚಲಾಯಿಸುವ ಮುನ್ನ ನನ್ನ ನೆನೆದು ಕಾಂಗ್ರೆಸ್ ಅಭ್ಯರ್ಥಿ ಅಶೋಕ್​ ಮನಗೂಳಿಗೆ ಮತ ಹಾಕಿ. ಅವರು ನಿಮ್ಮ ಸಮಸ್ಯೆಗಳನ್ನು ನಿವಾರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಾರೆ' ಎಂದು ಮತದಾರರಿಗೆ ಸಲಹೆ ನೀಡಿದರು.

ಎಂ.ಸಿ.ಮನಗೂಳಿ ಅವರ ನಿಧನದಿಂದ ಸಿಂದಗಿ ವಿಧಾನಸಭೆ ಕ್ಷೇತ್ರ ತೆರವಾಗಿತ್ತು. ಇದೀಗ ಈ ಕ್ಷೇತ್ರಕ್ಕೆ ಉಪಚುನಾವಣೆ ದಿನಾಂಕ ನಿಗದಿಯಾಗಿದ್ದು, ಚುನಾವಣೆಯ ಪ್ರಚಾರ ಕಣ ರಂಗೇರಿದೆ.

ಅಕ್ಟೋಬರ್ 30 ರಂದು ಸಿಂದಗಿ ಹಾಗೂ ಹಾನಗಲ್​ 2 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ನವೆಂಬರ್ 2ರಂದು ಮತ ಎಣಿಕೆ ನಡೆಯಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.