ETV Bharat / state

ಎಐಸಿಸಿ ಅಧ್ಯಕ್ಷೀಯ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಪರ ರಾಮಲಿಂಗಾರೆಡ್ಡಿ ಒಲವು - ಮಲ್ಲಿಕಾರ್ಜುನ ಖರ್ಗೆ

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ ಸ್ಪರ್ಧಿಸುತ್ತಿದ್ದಾರೆ. ಖರ್ಗೆ ನಮ್ಮ ರಾಜ್ಯದವರೇ ಆಗಿದ್ದಾರೆ. ಹೀಗಾಗಿ ಅವರತ್ತ ಒಲವು ಜಾಸ್ತಿ ಇದೆ ಎನ್ನುವ ಮೂಲಕ ಮಾಜಿ ಸಚಿವ ರಾಮಲಿಂಗಾರೆಡ್ಡಿ ಖರ್ಗೆ ಪರ ತಮ್ಮ ಬೆಂಬಲ ಸೂಚಿಸಿದ್ದಾರೆ.

Ramalingareddy
ಮಾಜಿ ಸಚಿವ ರಾಮಲಿಂಗಾರೆಡ್ಡಿ
author img

By

Published : Oct 16, 2022, 3:44 PM IST

Updated : Oct 16, 2022, 4:02 PM IST

ವಿಜಯಪುರ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜ್ಯದ ಹಿರಿಯ‌ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ಸ್ಪರ್ಧಿಸಿದ್ದು, ಸಹಜವಾಗಿ ಅವರು ನಮ್ಮ ರಾಜ್ಯದವರಾಗಿದ್ದಾರೆ ಎನ್ನುವ ಮೂಲಕ ಮಾಜಿ ಸಚಿವ ರಾಮಲಿಂಗಾರೆಡ್ಡಿ ಖರ್ಗೆ ಪರ ತಮ್ಮ ಬೆಂಬಲ ಸೂಚಿಸಿದ್ದಾರೆ.

ನಗರದ ಹೇಮರೆಡ್ಡಿ ಮಲ್ಲಮ್ಮ ಮಂಗಲ ಕಾರ್ಯಾಲಯದಲ್ಲಿ ರೆಡ್ಡಿ ಸಮುದಾಯದ ವಿದ್ಯಾರ್ಥಿಗಳಿಗೆ ಉಚಿತವಾಗಿ ಐಎಎಸ್, ಕೆಎಎಸ್ ತರಬೇತಿ ನೀಡುವ ಕೇಂದ್ರ ಉದ್ಘಾಟನೆ ಮಾಡಿದರು. ಬಳಿಕ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ ಸ್ಪರ್ಧಿಸುತ್ತಿದ್ದಾರೆ. ಖರ್ಗೆ ನಮ್ಮ ರಾಜ್ಯದವರೆ ಆಗಿದ್ದಾರೆ. ಹೀಗಾಗಿ ಅವರತ್ತ ಒಲವು ಜಾಸ್ತಿ ಇದೆ ಎಂದರು.

ಎಐಸಿಸಿ ಅಧ್ಯಕ್ಷ ಸ್ಥಾನಕ್ಜೆ ಗಾಂಧಿ ಪರಿವಾರದವರು ಬಿಟ್ಟು ಬೇರೆ ನಾಯಕರಿಗೆ ಅವಕಾಶ ನೀಡಲಾಗುತ್ತಿದೆ. ಇದು ಯಾವ ಸಂದೇಶ ರವಾನೆಯಾಗುತ್ತದೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಯುವ ನಾಯಕ ರಾಹುಲ್‌ ಗಾಂಧಿ ಸಹ ಇದನ್ನೇ ಪ್ರತಿಪಾದಿಸಿದ್ದರು. ಗಾಂಧಿ ಕುಟುಂಬ ಬಿಟ್ಟು ಬೇರೆ ನಾಯಕರಿಗೆ ಕಾಂಗ್ರೆಸ್ ಸರ್ವೋಚ್ಚ ಸ್ಥಾನ ನೀಡಬೇಕು ಎಂದು ಬಯಸಿದ್ದರು. ಅದಕ್ಕೆ ತಕ್ಕಂತೆ ಈಗ ಕಾಲ ಕೂಡಿ ಬಂದಿದೆ ಎಂದು ಹೇಳಿದರು.

ಮಾಜಿ ಸಚಿವ ರಾಮಲಿಂಗಾರೆಡ್ಡಿ

ಬ್ರಿಟಿಷರ ಜತೆ ಶಾಮೀಲಾದವರು ಯಾರು?: ಆರ್‌ಎಸ್ಎಸ್​ನವರು ಬ್ರಿಟಿಷ್ ಜೊತೆಗೆ ಶಾಮೀಲು ಆಗಿದ್ರು, ಈಗ ದೇಶ ಭಕ್ತರಂತೆ ವರ್ತಿಸುತ್ತಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಆರ್‌ಎಸ್ಎಸ್, ಬಿಜೆಪಿ ಭಾಗಿ ಆಗಿಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಲಕ್ಷಾಂತರ ಜನರು ಭಾಗವಹಿಸಿದ್ದರು ಎಂದು ಹೇಳುವ ಮೂಲಕ ರಾಮಲಿಂಗಾರೆಡ್ಡಿ ಆರ್​ಎಸ್​ಎಸ್ ವಿರುದ್ಧ ವಾಗ್ದಾಳಿ ನಡೆಸಿದರು.‌

ಇದನ್ನೂ ಓದಿ: ಎಐಸಿಸಿ ಅಧ್ಯಕ್ಷರ ಚುನಾವಣೆ: ಮಲ್ಲಿಕಾರ್ಜುನ ಖರ್ಗೆಗೆ ಮತ ನೀಡಲು ಮನವಿ ಮಾಡಿದ ಶಾಸಕರು

ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದೆ ತಾವೇ (ಆರ್‌ಎಸ್ ಎಸ್,ಬಿಜೆಪಿ) ಸ್ವಾತಂತ್ರ್ಯ ಹೋರಾಟಗಾರೆಂದು ಬಿಂಬಿಸಿಕೊಳ್ತಿದ್ದಾರೆ. ಬಿಜೆಪಿಯವರು ದೇಶವನ್ನು ಛಿದ್ರ ಛಿದ್ರ ಮಾಡ್ತಿದ್ದಾರೆ. ಬಿಜೆಪಿಯವರು ಸುಳ್ಳು ಹೇಳಿಕೊಂಡು ರಾಜಕೀಯ ಮಾಡುತ್ತಿದ್ದಾರೆ. ಜನರ ಪಕ್ಷ ಎಂದು ಬಿಜೆಪಿ ಹೆಸರು ಬದಲಾಯಿಸಿಕೊಳ್ಳಬೇಕು, ಬಿಜೆಪಿಯವರು ಸುಳ್ಳು ಹೇಳಿ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ಇದು ಬಹಳ ದಿನ ನಡೆಯೋದಿಲ್ಲ ಎಂದು ಕಿಡಿಕಾರಿದರು.

Last Updated : Oct 16, 2022, 4:02 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.