ವಿಜಯಪುರ: ಮೈಸೂರಿನ ವಿದ್ಯಾರ್ಥಿನಿ ಗ್ಯಾಂಗ್ರೇಪ್ ಪ್ರಕರಣ ಮಾಸುವ ಮುನ್ನವೇ ರಾಜ್ಯದಲ್ಲಿ ಅಪ್ರಾಪ್ತೆ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.
ಬಿಜಾಪುರ ಜಿಲ್ಲೆಯ ಸಿಂದಗಿ ತಾಲೂಕಿನ ಪೊಲೀಸ್ ಠಾಣಾ ವ್ಯಾಪ್ತಿಯ ಡಾಬಾದಲ್ಲಿ ಈ ಘಟನೆ ನಡೆದಿದೆ. ಡಾಬಾದಲ್ಲಿ ಅಪ್ರಾಪ್ತೆಯ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ನಡೆಸಿದ್ದಾನೆಂದು ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇವಿಂದ್ರ ಭೀಮರಾವ್ ಸಂಗೋಗಿ ಎಂಬುವವರ ವಿರುದ್ಧ ಸಂತ್ರಸ್ತೆಯ ತಂದೆ ದೂರು ದಾಖಲಿಸಿದ್ದಾರೆ. ಆರೋಪಿ ಅಪ್ರಾಪ್ತೆಯ ಮೇಲೆ ಸತತವಾಗಿ ಅತ್ಯಾಚಾರ ನಡೆಸಿ, ವಿಷಯವನ್ನು ಯಾರಿಗೂ ಹೇಳದಂತೆ ಧಮ್ಕಿ ಹಾಕಿದ್ದಾನೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲಿಸರು, ಆರೋಪಿಗಾಗಿ ಬಲೆ ಬೀಸಿದ್ದಾರೆ.
ಓದಿ: ಕ್ರೂರಿ ಗಂಡ: ಪತ್ನಿಯ ಶೀಲ ಶಂಕಿಸಿ ಖಾಸಗಿ ಭಾಗಕ್ಕೆ ಹೊಲಿಗೆ ಹಾಕಿದ!