ETV Bharat / state

ಪಡಿತರದಲ್ಲಿ ಅಕ್ಕಿ ಜೊತೆ ತೊಗರಿ ಬೇಳೆ ವಿತರಣೆಗೆ ಸರ್ಕಾರಕ್ಕೆ ಶಿಫಾರಸು : ಎ ಎಸ್ ಪಾಟೀಲ ನಡಹಳ್ಳಿ

ಸರಾಸರಿ ವಾರ್ಷಿಕವಾಗಿ ರೈತರಿಗೆ ನೆರವಾಗುವ ಜೊತೆಗೆ ಬಡವರಿಗೆ ಪಡಿತರದಲ್ಲಿ ತೊಗರಿ ಬೇಳೆಯನ್ನು ಉಚಿತವಾಗಿ ನೀಡುವ ಉದ್ದೇಶ ಇದೆ. ಆಹಾರ ನಿಗಮದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ‌..

muddhebihala
ಮುದ್ದೇಬಿಹಾಳ
author img

By

Published : Nov 29, 2020, 6:23 PM IST

ಮುದ್ದೇಬಿಹಾಳ : ಪಡಿತರ ಅಕ್ಕಿ ಜೊತೆಗೆ ತೊಗರಿ ಬೇಳೆ ವಿತರಣೆಗೆ ಸರ್ಕಾರಕ್ಕೆ ಶಿಫಾರಸು ಮಾಡಿರುವುದಾಗಿ ಆಹಾರ ಪೂರೈಕೆ ನಿಗಮದ ಅಧ್ಯಕ್ಷ, ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.

ಆಹಾರ ಪೂರೈಕೆ ನಿಗಮದ ಅಧ್ಯಕ್ಷ, ಶಾಸಕ ಎ.ಎಸ್.ಪಾಟೀಲ ನಡಹಳ್ಳಿ

ತಾಲೂಕಿನ ಆಲೂರ ಗ್ರಾಮದ ಮಾರುತೇಶ್ವರ ದೇವಸ್ಥಾನದಲ್ಲಿ ರವಿವಾರ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕರ್ನಾಟಕದಲ್ಲಿ ಪ್ರತಿ ವರ್ಷ 12 ಲಕ್ಷ ಟನ್ ತೊಗರಿಯನ್ನು ಬೆಳೆಯಲಾಗುತ್ತದೆ.

ಸರಾಸರಿ ವಾರ್ಷಿಕವಾಗಿ ರೈತರಿಗೆ ನೆರವಾಗುವ ಜೊತೆಗೆ ಬಡವರಿಗೆ ಪಡಿತರದಲ್ಲಿ ತೊಗರಿ ಬೇಳೆಯನ್ನು ಉಚಿತವಾಗಿ ನೀಡುವ ಉದ್ದೇಶ ಇದೆ. ಆಹಾರ ನಿಗಮದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ‌ ಎಂದು ಹೇಳಿದರು‌.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಎಂ.ಎಸ್.ಪಾಟೀಲ, ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮನಗೌಡ ಬಿರಾದಾರ ಕವಡಿಮಟ್ಟಿ, ಎಪಿಎಂಸಿ ಅಧ್ಯಕ್ಷ ರಾಮನಗೌಡ ಇಂಗಳಗಿ, ನಿರ್ದೇಶಕ ಪ್ರಭು ಡೇರೇದ ಮೊದಲಾದವರು ಇದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.