ವಿಜಯಪುರ: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ, ಬೃಹತ್ ಪಾದಯಾತ್ರೆ ಮಾಡಲು ನಿರ್ಧರಿಸಲಾಗಿದೆ ಎಂದು ಕೂಡಸಂಗಮದ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ನಗರದಲ್ಲಿಂದು ಮಾತನಾಡಿದ ಅವರು, 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಬೃಹತ್ ಹೋರಾಟಕ್ಕೆ ಪಂಚಮಸಾಲಿ ಸಮುದಾಯದವರು ನಿರ್ಧಾರ ಕೈಗೊಂಡಿದ್ದಾರೆ ಎಂದರು. ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಡಿಸೆಂಬರ್ 23 ರಿಂದ ಪಾದಯಾತ್ರೆ ನಡೆಸಲಿದ್ದೇವೆ. ಕೂಡಲ ಸಂಗಮ ಪೀಠದಿಂದ ಬೆಂಗಳೂರು ವಿಧಾನಸೌಧದವರೆಗೆ ಬೃಹತ್ ಪಾದಯಾತ್ರೆ ಮಾಡಲಿದ್ದೇವೆ ಎಂದರು.
ಪಂಚಲಕ್ಷ ಹೆಜ್ಜೆಗಳೊಂದಿಗೆ ಪಾದಯಾತ್ರೆಗೆ ಮುಂದಾಗಿದ್ದೇವೆ. ಕಳೆದ ಅಕ್ಟೋಬರ್ 28 ರಂದು ಬೆಳಗಾವಿ ಸುವರ್ಣ ಸೌಧದ ಎದುರು ಉಪವಾಸ ಸತ್ಯಾಗ್ರಹ ನಡೆಸಿದ್ದಾಗ, ಬೇಡಿಕೆ ಈಡೇರಿಸುವುದಾಗಿ ಸಿಎಂ ಯಡಿಯೂರಪ್ಪ ಭರವಸೆ ನೀಡಿದ್ದರು ಎಂದು ತಿಳಿಸಿದರು.
ಈವರೆಗೂ ಬೇಡಿಕೆ ಈಡೇರದ ಕಾರಣ ಪಾದಯಾತ್ರೆಗೆ ಮುಂದಾಗಿದ್ದೇವೆ. ಸ್ವತಃ ಸಿಎಂ ಅವರು ಫೋನ್ ಕರೆ ಮಾಡಿ ಭರವಸೆ ನೀಡಿದ್ದರು. ಆದರೆ ಈ ಭರವಸೆ ಇನ್ನೂ ಈಡೇರಿಸಿಲ್ಲ ಎಂದು ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.
ಓದಿ: ನಮ್ಮ ಸಮುದಾಯಕ್ಕೆ ಅಗತ್ಯ ಸೌಲಭ್ಯ ಕಲ್ಪಿಸದಿದ್ದರೆ ಪಾದಯಾತ್ರೆ ಮಾಡುತ್ತೇವೆ: ಜಯ ಮೃತ್ಯುಂಜಯ ಸ್ವಾಮೀಜಿ