ವಿಜಯಪುರ: ಕಾಂಗ್ರೆಸ್ ಮುಖಂಡೆ ರೇಷ್ಮಾ ಪಡೇಕನೂರ ಹತ್ಯೆ ಪ್ರಕರಣದಲ್ಲಿ ವಿಚಾರಣೆ ವೇಳೆ ಲಂಚ ಸ್ವೀಕರಿದ್ದಾರೆ ಎನ್ನಲಾದ ಕರ್ನಾಟಕದ ಪೊಲೀಸ್ ಅಧಿಕಾರಿಯನ್ನು ಮಹಾರಾಷ್ಟ್ರ ಎಸಿಬಿಯ ನಾಲ್ವರು ಅಧಿಕಾರಿಗಳು ಹುಡುಕಿಕೊಂಡು ರಾಜ್ಯಕ್ಕೆ ಬಂದಿದ್ದಾರೆ.
ಆಗಸ್ಟ್ 22ರಂದು ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಲಂಚ ಸ್ವೀಕರಿಸುತ್ತಿದ್ದಾಗ ಬಸವನಬಾಗೇವಾಡಿ ಡಿವೈಎಸ್‍ಪಿ ಮಹೇಶ್ವರಗೌಡ ಹಾಗೂ ಪೇದೆ ಮಲ್ಲಿಕಾರ್ಜುನ ಪೂಜಾರಿ ಮಹಾರಾಷ್ಟ್ರ ಎಸಿಬಿ ಬಲೆಗೆ ಬಿದ್ದಿದ್ದರು. ಈಗಾಗಲೇ ಪೇದೆ ಎಸಿಬಿ ಬಲೆಗೆ ಬಿದ್ದಿದ್ದು, ಡಿವೈಎಸ್‍ಪಿ ಪರಾರಿಯಾಗಿದ್ದಾರೆ. ಆತನಿಗಾಗಿ ತೀವ್ರ ಶೋಧ ನಡೆಯುತ್ತಿದೆ.
ವಿಜಯಪುರ ಕೈ ನಾಯಕಿ ಹತ್ಯೆ ಕೇಸ್‌ಗೆ ಟ್ವಿಸ್ಟ್.. ಖಾಕಿ ತನಿಖೆಯಿಂದ ಸತ್ಯ ಬಯಲು!
ರೇಷ್ಮಾ ಪಡೇಕನೂರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತೌಫಿಕ್ ಪೈಲ್ವಾನ್ ಕುಟುಂಬಸ್ಥರಿಗೆ ಡಿವೈಎಸ್‍ಪಿ ಹಾಗೂ ಪೂಜಾರಿ ಒಟ್ಟು ₹ 5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.