ವಿಜಯಪುರ : ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಾಮ ಸಹಾಯಕರ ವೇತನ ಹೆಚ್ಚಿಸಿ ಸೇವಾ ಭದ್ರತೆ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಗ್ರಾಮ ಸಹಾಯಕರು, ಕಳೆದ ಹಲವು ವರ್ಷಗಳಿಂದ ಸೇವೆ ಮಾಡುತ್ತಿದ್ದರೂ ಸರ್ಕಾರ ಮಾತ್ರ ಗ್ರಾಮ ಸಹಾಯಕರಿಗೆ ಯಾವುದೇ ಸೌಲಭ್ಯ ನೀಡುತ್ತಿಲ್ಲ. ಸರ್ಕಾರ ನೀಡುವ ₹12 ಸಾವಿರ ಸಂಬಳದಲ್ಲಿ ಜೀವನ ನಡೆಸುವುದೇ ಕಷ್ಟವಾಗಿದೆ ಎಂದರು.
ಗ್ರಾಮ ಸಹಾಯಕರ ವೇತನ ಹೆಚ್ಚಿಸುವಂತೆ ಪ್ರತಿಭಟನಾಕಾರು ಒತ್ತಾಯಿಸಿದ್ದು, ಇತ್ತ ಕೊರೊನಾ ಭೀತಿ ಆರಂಭದ ದಿನದಿಂದಲೂ ವಾರಿಯರ್ಸ್‌ಗಳಾಗಿ ಸೇವೆ ಸಲ್ಲಿಸುತ್ತಿದ್ದೇವೆ. ಆದರೆ, ಯಾವುದೇ ರಕ್ಷಣಾ ಕಿಟ್ ನೀಡಿಲ್ಲ ಎಂದು ಆರೋಪಿಸಿದರು.
ಇನ್ನೂ ಕೊರೊನಾ ಭೀತಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಸಹಾಯಕರಿಗೆ ಸರ್ಕಾರ ವೇತನ ಹೆಚ್ಚಿಸಬೇಕು, ಕೋವಿಡ್-19 ಜೀವ ವಿಮಾ ಸೌಲಭ್ಯ, ಇದಲ್ಲದೆ ಗ್ರಾಮ ಸಹಾಯಕರ ಮೇಲೆ ಹಲ್ಲೆಗಳಾಗುತ್ತಿದ್ದು, ಸರ್ಕಾರ ಕ್ರಮಕ್ಕೆ ಮುಂದಾಗಬೇಕು. ಕಳೆದ 5 ತಿಂಗಳ ವೇತನ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.