ವಿಜಯಪುರ: ಖಾಸಗಿ ಶಾಲಾ ಬಸ್ಸೊಂದು ಆಟೋಗೆ ಡಿಕ್ಕಿ ಹೊಡೆದು ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಗರದ ಮನಗೂಳಿ ಬೈಪಾಸ್ ಬಳಿ ಸಂಜೆ ನಡೆದಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ಪಲ್ಟಿಯಾಗಿದ್ದು, ಆಟೋದಲ್ಲಿದ್ದ ನಾಲ್ಕಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಸ್ ವಿಜಯಪುರದಿಂದ ಮನಗೂಳಿ ಮೂಲಕ ತಳೇವಾಡಕ್ಕೆ ಹೋಗುತ್ತಿತ್ತು. ವಿಜಯಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಮಹಾರಾಷ್ಟ್ರ: ಎರಡು ಎಟಿಎಂ ಒಡೆದು 27 ಲಕ್ಷ ರೂ ದೋಚಿದ ಕಳ್ಳರು!