ವಿಜಯಪುರ: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಅಪಚಿತ ವಾಹನ ಡಿಕ್ಕಿ ಹೊಡೆದು ಪಟ್ಟಣ ಪಂಚಾಯಿತಿ ಸದಸ್ಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಟ್ಟಣದ ಹೊರ ಭಾಗದ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ನಡೆದಿದೆ.
ಜಿಲ್ಲೆಯ ಕೊಲ್ಹಾರ ಪಟ್ಟಣ ಪಂಚಾಯಿತಿ ಬಿಜೆಪಿ ಸದಸ್ಯ ಸುರೇಶ್ ಕಾಳೆ (45) ಮೃತ. ಸುರೇಶ್ ಕೆಲಸ ಮುಗಿಸಿಕೊಂಡು ಕೊಲ್ಹಾರಕ್ಕೆ ವಾಪಸ್ ಆಗುತ್ತಿದ್ದ ವೇಳೆ ಅಪರಿಚಿತ ವಾಹನ ಬೈಕ್ಗೆ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಸಂಬಂಧ ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.