ETV Bharat / state

ಕೊನೆಗೂ ಬದುಕಿ ಉಳಿಯಲಿಲ್ಲ ವೃದ್ಧ: ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ವಿರುದ್ಧ ಆಕ್ರೋಶ - ಗ್ಯಾಂಗ್ರಿನ್​​ನಿಂದ ನರಳುತ್ತಿದ್ದ ವೃದ್ಧನಿಗೆ ಚಿಕಿತ್ಸೆ ನೀಡಿದ ಆಸ್ಪತ್ರೆ

ಗ್ಯಾಂಗ್ರಿನ್​​ನಿಂದ ಬಳಲುತ್ತಿದ್ದ ವೃದ್ಧನನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವನ್ನಪ್ಪಿದ್ದಾರೆ.

Salam Bharat trust secretary outrage against district hospital
ಕೊನೆಗೂ ಬದುಕಿ ಉಳಿಯಲಿಲ್ಲ ವೃದ್ಧ
author img

By

Published : Jul 25, 2021, 10:58 PM IST

ಮುದ್ದೇಬಿಹಾಳ: ತಾಲೂಕಿನ ತಂಗಡಗಿ ಗ್ರಾಮದ ರಸ್ತೆ ಬಳಿ ಗ್ಯಾಂಗ್ರಿನ್​​ನಿಂದ ನರಳುತ್ತಿದ್ದ ವೃದ್ಧನನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆತ ಮೃತಪಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ವ್ಯಕ್ತಿಗೆ ಸರಿಯಾಗಿ ಚಿಕಿತ್ಸೆ ನೀಡದಿದ್ದರಿಂದ ಸಾವಾಗಿದೆ ಎಂದು ಸಲಾಂ ಭಾರತ ಟ್ರಸ್ಟ್ ರಾಜ್ಯ ಪ್ರಧಾನ ಕಾರ್ಯದರ್ಶಿಯೋರ್ವರು ಆರೋಪಿಸಿದ್ದಾರೆ.

ಆಸ್ಪತ್ರೆ ವಿರುದ್ಧ ಸಲಾಂ ಭಾರತ ಟ್ರಸ್ಟ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆಕ್ರೋಶ

ಜು.09 ರಂದು ಅಪರಿಚಿತ ವ್ಯಕ್ತಿಯೋರ್ವರು ಅನಾರೋಗ್ಯದಿಂದ ರಸ್ತೆ ಬಳಿ ಬಿದ್ದಿದ್ದಾರೆ ಎಂದು ಸಲಾಂ ಭಾರತ ಟ್ರಸ್ಟ್ ರಾಜ್ಯ ಪ್ರಧಾನ ಕಾರ್ಯದರ್ಶಿ ವಾಜೀದ ಹಡಲಗೇರಿ ಅವರು ಠಾಣೆಗೆ ಮಾಹಿತಿ ನೀಡಿದ್ದರು. ಬಳಿಕ ಆತನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಆ ವ್ಯಕ್ತಿ ಮೃತಪಟ್ಟಿದ್ದಾನೆ. ಈತನಿಗೆ 55 ರಿಂದ 60 ವರ್ಷ ವಯಸ್ಸಾಗಿದ್ದು, ಆತನ ಹೆಸರು, ಪರಿಚಯ ವಿಳಾಸ ತಿಳಿದು ಬಂದಿರುವುದಿಲ್ಲ. ಮೃತನ ವಾರಸುದಾರರು ಇದ್ದರೆ ಪೊಲೀಸ್ ಠಾಣೆ ಸಂಪರ್ಕಿಸುವಂತೆ ತಿಳಿಸಿದ್ದಾರೆ.

ಆಸ್ಪತ್ರೆ ವ್ಯವಸ್ಥೆ ವಿರುದ್ಧ ಕಿಡಿ:

ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಅನಾಥರಿಗೆ ಯಾವುದೇ ಚಿಕಿತ್ಸೆ ದೊರೆಯುವುದಿಲ್ಲ ಎಂಬುದಕ್ಕೆ ಮುದ್ದೇಬಿಹಾಳದಿಂದ ಕರೆದೊಯ್ದು ಚಿಕಿತ್ಸೆಗೆಂದು ದಾಖಲಿಸಿದ್ದ ಅಪರಿಚಿತ ವೃದ್ಧನ ಸಾವೇ ಸಾಕ್ಷಿ ಎಂದು ಸಲಾಂ ಭಾರತ ಟ್ರಸ್ಟ್ ರಾಜ್ಯ ಪ್ರಧಾನ ಕಾರ್ಯದರ್ಶಿ ವಾಜೀದ್​ ಹಡಲಗೇರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಘಟನೆಗಳು ಜಿಲ್ಲಾಸ್ಪತ್ರೆಯಲ್ಲಿ ಮರುಕಳಿಸದಂತೆ ಜಾಗೃತಿ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಈ ಪ್ರಕರಣದ ಕುರಿದು ಚಿಕಿತ್ಸೆಯ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತದೆ. ಯಾಕೆ ತಪಾಸಣೆ ನಡೆಸಿಲ್ಲ ಎಂದು ಗಮನಿಸಲಾಗುವುದು. ಒಂದು ವೇಳೆ ತಪ್ಪು ನಡೆದಿದ್ದು ಕಂಡು ಬಂದಲ್ಲಿ ಯಾರು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲು ಮೇಲಾಧಿಕಾರಿಗಳಿಗೆ ಶಿಫಾರಸು ಮಾಡಲಾಗುತ್ತದೆ ಎಂದು ಜಿಲ್ಲಾಸ್ಪತ್ರೆಯ ಡಾ.ಲಕ್ಕಣ್ಣನವರ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.