ವಿಜಯಪುರ: ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಿಂದ ಬ್ಯಾಂಕ್ ಹಾಗೂ ಎಟಿಎಂಗಳಿಗೆ ಸ್ಯಾನಿಟೈಸರ್ ಮಿಶ್ರಿತ ರಾಸಾಯನಿಕ ದ್ರವ ಸಿಂಪಡಣೆ ಮಾಡಲಾಯಿತು. ನಗರದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿವೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಜನರು ಬ್ಯಾಂಕ್ಗಳಿಗೆ ಬಂದು ವಹಿವಾಟು ನಡೆಸುವ ಕಾರಣ ಸ್ಯಾನಿಟೈಸರ್ ಸಿಂಪಡಣೆ ಮಾಡಿದ್ದಾರೆ.
ಇನ್ನು 15ಕ್ಕೂ ಅಧಿಕ ರಾಷ್ಟ್ರೀಕೃತ ಮತ್ತು ಖಾಸಗಿ ಬ್ಯಾಂಕ್ ಹಾಗೂ ಎಟಿಎಂಗಳಲ್ಲಿ ರೆಡ್ ಕ್ರಾಸ್ ಸಂಸ್ಥೆ ಕಾರ್ಯಕರ್ತರು ಸ್ಯಾನಿಟೈಸರ್ ಸಿಂಪಡಣೆ ಮಾಡಿ, ಬರುವ ಗ್ರಾಹಕರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಕನಿಷ್ಠ ಅರ್ಧ ಗಂಟೆಗೊಮ್ಮೆ ಸ್ಯಾನಿಟೈಸರ್ ಬಳಸಿ ಕೈ ತೊಳೆಯುವಂತೆ ಸಿಬ್ಬಂದಿಗೆ ಜಾಗೃತಿ ಮೂಡಿಸಿದ್ದಾರೆ.