ETV Bharat / state

ಪ್ರವಾಹ ಸಂತ್ರಸ್ತರಿಗೆ ಹೆದರಿ ಅಧಿವೇಶನ ಬೆಂಗಳೂರಿಗೆ ಸ್ಥಳಾಂತರ.. ಎಂ ಬಿ ಪಾಟೀಲ್ ವ್ಯಂಗ್ಯ

ವಿಜಯಪುರದಲ್ಲಿ ಮಾತನಾಡಿದ ಮಾಜಿ ಸಚಿವ ಎಂ ಬಿ ಪಾಟೀಲ್​​ ಅವರು ಪ್ರವಾಹ ಸಂತ್ರಸ್ತರಿಗೆ ಹೆದರಿ ಅಧಿವೇಶನ ಬೆಂಗಳೂರಿಗೆ ಸ್ಥಳಾಂತರ ಮಾಡಿರುವುದು ಸಂತ್ರಸ್ತರಿಗೆ ಮಾಡಿದ ದ್ರೋಹವಾಗಿದೆ. ಈ ಸರ್ಕಾರ ಗೊತ್ತು ಗುರಿ ಇಲ್ಲದೇ ಸಾಗುತ್ತಿದೆ. ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಹೀಗೆ ಆದರೆ ಸರ್ಕಾರ 3 ತಿಂಗಳು ಸಹ ಉಳಿಯುವುದಿಲ್ಲ ಎಂದಿದ್ದಾರೆ.

ಎಂ.ಬಿ. ಪಾಟೀಲ್
author img

By

Published : Sep 20, 2019, 2:07 PM IST

ವಿಜಯಪುರ: ರಾಜ್ಯ ಸರ್ಕಾರ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸಬೇಕಾಗಿತ್ತು.ಆದರೆ, ಪ್ರವಾಹ ಸಂತ್ರಸ್ತರಿಗೆ ಹೆದರಿ ಅಧಿವೇಶನ ಬೆಂಗಳೂರಿಗೆ ಸ್ಥಳಾಂತರ ಮಾಡಿರುವುದು ಸಂತ್ರಸ್ತರಿಗೆ ಮಾಡಿದ ದ್ರೋಹವಾಗಿದೆ ಎಂದು ಮಾಜಿ ಸಚಿವ ಎಂ ಬಿ ಪಾಟೀಲ್​​ ಕಿಡಿಕಾರಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹದಿಂದ ಉತ್ತರ ಕರ್ನಾಟಕದ ಜನ ತತ್ತರಿಸಿ ಹೋಗಿದ್ದಾರೆ. ಮನೆ-ಮಠ, ಆಸ್ತಿ ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಈ ಪರಿಸ್ಥಿತಿಯಲ್ಲಿ ಬೆಳಗಾವಿಯಲ್ಲಿ ಅಧಿವೇಶನ ನಡೆಸಿ, ಸಂತ್ರಸ್ತರಿಗೆ ಧೈರ್ಯ ತುಂಬುವ ಕೆಲಸವಾಗಬೇಕಾಗಿತ್ತು. ಅದು ಬಿಟ್ಡು ಸಂತ್ರಸ್ತರು ಪ್ರತಿಭಟನೆ ಮಾಡುತ್ತಾರೆ ಎನ್ನುವ ಭಯದಲ್ಲಿ ಅಧಿವೇಶನ ಬೆಂಗಳೂರಿಗೆ ಸ್ಥಳಾಂತರ ಮಾಡಿದ್ದು ಸರಿಯಾದ ಕ್ರಮವಲ್ಲ ಎಂದರು.

ಸರ್ಕಾರ 3 ತಿಂಗಳು ಸಹ ಉಳಿಯುವುದಿಲ್ಲ.. ಮಾಜಿ ಸಚಿವ ಎಂ ಬಿ ಪಾಟೀಲ್

ಸಿಎಂ ಯಡಿಯೂರಪ್ಪ ಅಧಿಕಾರ ವಹಿಸಿಕೊಳ್ಳುವಾಗ ದ್ವೇಷ ರಾಜಕಾರಣ ಮಾಡುವುದಿಲ್ಲ ಎಂದು ಹೇಳಿ, ಈಗ ಕಾಂಗ್ರೆಸ್ ಶಾಸಕರ ಕ್ಷೇತ್ರಗಳ ಅನುದಾನ ತಡೆಹಿಡಿಯುತ್ತಿದ್ದಾರೆ. ತನ್ನ ಕ್ಷೇತ್ರದ ಅನುದಾನ ಸಹ ತಡೆಹಿಡಿದಿದ್ದಾರೆ ಎಂದು ಆರೋಪಿಸಿದರು.

ಈ ಸರ್ಕಾರ ಗೊತ್ತು ಗುರಿ ಇಲ್ಲದೇ ಸಾಗುತ್ತಿದೆ. ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಹೀಗೆ ಆದರೆ ಸರ್ಕಾರ 3 ತಿಂಗಳು ಸಹ ಉಳಿಯುವುದಿಲ್ಲ. ಕೋಡಿಮಠದ ಶ್ರೀಗಳು ಹೇಳಿದ ಭವಿಷ್ಯ ನಿಜವಾಗಬಹುದೇನೋ ಎಂದು ಮಾರ್ಮಿಕವಾಗಿ ನುಡಿದರು.

Intro:ವಿಜಯಪುರ

Body:ವಿಜಯಪುರ: ರಾಜ್ಯ ಸರ್ಕಾರ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಸಬೇಕಾಗಿತ್ತು. ಆದರೆ ಪ್ರವಾಹ ಸಂತ್ರಸ್ತರಿಗೆ ಹೆದರಿ ಅಧಿವೇಶನ ಬೆಂಗಳೂರಿಗೆ ಸ್ಥಳಾಂತರ ಮಾಡಿರುವದು ಸಂತ್ರಸ್ತರಿಗೆ ಮಾಡಿದ ದ್ರೋಹವಾಗಿದೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ಟೀಕಿಸಿದರು.
ವಿಜಯಪುರ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ಪ್ರವಾಹದಿಂದ ಉತ್ತರ ಕರ್ನಾಟಕ ತತ್ತರಿಸಿ ಹೋಗಿದ್ದಾರೆ. ಮನೆ, ಮಠ ಆಸ್ತಿ ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಈ ಪರಿಸ್ಥಿತಿಯಲ್ಲಿ ಬೆಳಗಾವಿಯಲ್ಲಿ ಅಧಿವೇಶನ ನಡೆಸಿದರೆ ಸಂತ್ರಸ್ತರಿಗೆ ಧೈರ್ಯ ತುಂಬುವ ಕೆಲಸವಾಗಬೇಕಾಗಿತ್ತು. ಅದು ಬಿಟ್ಡು ಸಂತ್ರಸ್ತರು ಪ್ರತಿಭಟನೆ ಮಾಡುತ್ತಾರೆ ಎನ್ನುವ ಭಯದಲ್ಲಿ ಅಧಿವೇಶನ ಬೆಂಗಳೂರಿಗೆ ಸ್ಥಳಾಂತರ ಮಾಡಿದ್ದು ಸರಿಯಾದ ಕ್ರಮವಲ್ಲ ಎಂದರು.
ಸಿಎಂ ಯಡಿಯೂರಪ್ಪ ಅಧಿಕಾರ ವಹಿಸಿಕೊಳ್ಳುವಾಗ ದ್ವೇಷ ರಾಜಕಾರಣ ಮಾಡುವದಿಲ್ಲ ಎಂದು ಹೇಳಿ, ಈಗ ಕಾಂಗ್ರೆಸ್ ಶಾಸಕರ ಕ್ಷೇತ್ರ ಅನುದಾನ ತಡೆಹಿಡಿಯುತ್ತಿದ್ದಾರೆ. ತನ್ನ ಕ್ಷೇತ್ರದ ಅನುದಾನ ಸಹ ತಡೆಹಿಡಿದಿದ್ದಾರೆ ಎಂದು ಆರೋಪಿಸಿದರು.
ಈ ಸರ್ಕಾರ ಗೊತ್ತು ಗುರಿ ಇಲ್ಲದೇ ಸಾಗುತ್ತಿದೆ. ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ,ಹೀಗೆ ಆದರೆ ಸರ್ಕಾರ 3 ತಿಂಗಳು ಸಹ ಉಳಿಯುವದಿಲ್ಲ. ಕೋಡಿಮಠದ ಶ್ರೀಗಳು ಹೇಳಿದ ಭವಿಷ್ಯ ನಿಜವಾಗಬಹುದೇನೋ ಎಂದು ಮಾರ್ಮಿಕವಾಗಿ ನುಡಿದರು.

Conclusion:ವಿಜಯಪುರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.