ವಿಜಯಪುರ: ಜಿಲ್ಲೆಯಲ್ಲಿ ಒಂದು ವಾರ ಲಾಕ್‌ಡೌನ್ ಮಾಡುವುದಿಲ್ಲ, ಬದಲಾಗಿ ಶನಿವಾರ ಹಾಗೂ ರವಿವಾರ ಮಾತ್ರ ಲಾಕ್‌ಡೌನ್ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟಪಡಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ಮಾತನಾಡಿದ ಅವರು, ಸಿಎಂ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ವೇಳೆ, ಜಿಲ್ಲೆಯ ಸ್ಥಿತಿಗತಿ ಕುರಿತು ಅವರ ಗಮನಕ್ಕೆ ತರಲಾಗಿದೆ. ರಾಜ್ಯದಲ್ಲಿ ವಾರಪೂರ್ತಿ ಲಾಕ್‌ಡೌನ್ ಬೇಡ ಬದಲಾಗಿ ಭಾಗಶಃ ಲಾಕ್‌ಡೌನ್ ಮಾಡಲಾಗುವುದು ಎಂದು ಹೇಳಿದ್ದಾರೆ ಎಂದರು. ಜಿಲ್ಲೆಯ ಜನಪ್ರತಿನಿಧಿಗಳು ಕೂಡ ಲಾಕ್‌ಡೌನ್ ಮಾಡುವಂತೆ ಅಭಿಪ್ರಾಯಪಟ್ಟಿದ್ದರು. ಆದರೆ ಮುಖ್ಯಮಂತ್ರಿಗಳೇ ಬೇಡ ಎಂದಿದ್ದಾರೆ ಎಂದು ಸಚಿವೆ ಜೊಲ್ಲೆ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ 15 ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದ್ದು, ಅವುಗಳು ಕೂಡ ಈಗಾಗಲೇ ಕಾರ್ಯನಿರ್ವಸುತ್ತಿವೆ. ಎರಡು ದಿನಗಳಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಆರ್‌ಟಿಪಿಸಿಆರ್ ಲ್ಯಾಬ್ ಆರಂಭಿಸಲಾಗುವುದು. ಈ ಹಿನ್ನೆಲೆ ಜಿಲ್ಲೆಯಲ್ಲಿ ಸ್ವ್ಯಾಬ್ ಟೆಸ್ಟ್ ಮಾಡಲು ಸಹಾಯವಾಗಲಿದೆ ಎಂದರು.