ETV Bharat / state

ಮಹಾಶಿವರಾತ್ರಿ ಆಚರಣೆಗೆ ಸಜ್ಜಾದ ಗುಮ್ಮಟನಗರಿ ವಿಜಯಪುರ

author img

By

Published : Feb 28, 2022, 4:50 PM IST

ಮಹಾಶಿವರಾತ್ರಿ ಆಚರಣೆಗೆ ಗುಮ್ಮಟನಗರಿ ಸಜ್ಜಾಗಿದೆ. ಮಂಗಳವಾರ ಬೆಳಗ್ಗೆ 4.30ಕ್ಕೆ ಕಾಶಿ ವಿಶ್ವನಾಥನಿಗೆ ರುದ್ರಾಭಿಷೇಕ, ಭಸ್ಮಾರ್ಚನೆ, ಬಿಲ್ವಾರ್ಚನೆ, ಪುಷ್ಪಾರ್ಚನೆ, ಪಂಚ ಕಳಸಾರ್ಚನೆ ಬಳಿಕ ಪ್ರತಿ ಗಂಟೆಗೊಮ್ಮೆ ಪೂಜೆ ಜರುಗಲಿದೆ.

Mahashivaratri is a simple ritual in Shivgiri
ಶಿವಗಿರಿಯಲ್ಲಿ ಮಹಾಶಿವರಾತ್ರಿ ಸರಳ ಆಚರಣೆ

ವಿಜಯಪುರ: ಏಷ್ಯಾದ ಎರಡನೇ ಅತಿದೊಡ್ಡ ಶಿವನಮೂರ್ತಿ ಹೊಂದಿರುವ ವಿಜಯಪುರ ನಗರದ ಶಿವಗಿರಿಯಲ್ಲಿ ಈ ಬಾರಿ ಕರೋನಾ ಭೀತಿ ಕಾರಣ ಮಹಾ ಶಿವರಾತ್ರಿಯನ್ನು ಸರಳ ಆಚರಣೆ ಜತೆ ಧಾರ್ಮಿಕ ಕಾರ್ಯಕ್ರಮಗಳಿಗೆ ಮಾತ್ರ ಸೀಮಿತಗೊಳಿಸಲಾಗಿದೆ.‌

ಶಿವಗಿರಿಯಲ್ಲಿನ ಶಿವನ ಬೃಹತ್ ಮೂರ್ತಿ ಸ್ಥಾಪಿಸಿ 16 ವರ್ಷಗಳು ಕಳೆದಿವೆ.‌ ಶಿವಗಿರಿಯ ಉಸ್ತುವಾರಿ ನಿರ್ವಹಿಸುತ್ತಿರುವ ಟಿ.ಕೆ. ಪಾಟೀಲ (ಬೆನಕಟ್ಟಿ) ಚಾರಿಟೇಬಲ್ ಟ್ರಸ್ಟ್‌ ಈ ವರ್ಷದ ಉತ್ಸವವನ್ನು ಧಾರ್ಮಿಕ ಶ್ರದ್ಧಾ–ಭಕ್ತಿಯ ಆಚರಣೆಗೆ ಮಾತ್ರ ಮೀಸಲಿರಿಸಲಾಗಿದೆ ಎಂದು ತಿಳಿಸಿದ್ದಾರೆ.

ಕೊರೊನಾ ಹರಡಬಾರದು ಎಂಬ ಉದ್ದೇಶದಿಂದ ಸಾಂಕೇತಿಕವಾಗಿ ಆಚರಿಸಲು ಕಾರ್ಯಕ್ರಮ ಆಯೋಜಿಸಿದೆ. ಮಹಾ ಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ಶಿವಗಿರಿಯ ಟಿ.ಕೆ. ಪಾಟೀಲ ಚಾರಿಟೇಬಲ್ ಟ್ರಸ್ಟ್‌ ಮಂಗಳವಾರ ಬೆಳಗ್ಗೆ 4.30ಕ್ಕೆ ಕಾಶಿ ವಿಶ್ವನಾಥನಿಗೆ ರುದ್ರಾಭಿಷೇಕ, ಭಸ್ಮಾರ್ಚನೆ, ಬಿಲ್ವಾರ್ಚನೆ, ಪುಷ್ಪಾರ್ಚನೆ, ಪಂಚ ಕಳಸಾರ್ಚನೆ ಬಳಿಕ ಪ್ರತಿ ಗಂಟೆಗೊಮ್ಮೆ ಪೂಜೆ ನೆರವೇರಲಿದೆ ಎಂದು ಮಾಹಿತಿ ನೀಡಿದರು.

ಬೆಳಗ್ಗೆ 6ಕ್ಕೆ ಮಂಗಳ ವಾದ್ಯಗಳೊಂದಿಗೆ ಶಹನಾಯಿ ಕಾರ್ಯಕ್ರಮ, 7ಕ್ಕೆ ಜಾತ್ರಾ ಉತ್ಸವದ ಧ್ವಜಾರೋಹಣ, 8.30ಕ್ಕೆ ಪೂಜೆ, 10 ಗಂಟೆಯಿಂದ ವೈವಿಧ್ಯಮಯ ಮನರಂಜನಾ ಕಾರ್ಯಕ್ರಮಗಳು ಜರುಗಲಿವೆ ಎಂದು ಟ್ರಸ್ಟ್‌ನ ಜಂಟಿ ಕಾರ್ಯದರ್ಶಿ ಆರ್‌.ಟಿ. ಪಾಟೀಲ ತಿಳಿಸಿದರು.

ಮಧ್ಯಾಹ್ನ 2ಕ್ಕೆ ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ, ಸಂಜೆ 4.30ಕ್ಕೆ ಪಂಚಲೋಹದ ಬಂಗಾರ ಲೇಪಿತ 23 ಅಡಿ ಎತ್ತರದ ರಥದಲ್ಲಿ ಶಿವನ ಬೆಳ್ಳಿ ಮೂರ್ತಿಯನ್ನು ಪ್ರತಿಷ್ಠಾಪಿಸಿದ ಬಳಿಕ, ಒಂದೆಡೆ ವಿಜಯಪುರದ ಮುತ್ತೈದೆಯರು ರಥದ ಹಗ್ಗ ಎಳೆದರೆ, ಇನ್ನೊಂದೆಡೆ ಸೊಸೆಯರು ರಥವನ್ನು ಮುನ್ನಡೆಸಲಿದ್ದಾರೆ. ಇದು ಈ ಬಾರಿ ಸಾಂಕೇತಿಕವಾಗಿ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Watch : ಮೆಟ್ರೋ ನಿಲ್ದಾಣದ ಗ್ರಿಲ್​ನಲ್ಲಿ ಸಿಲುಕಿಕೊಂಡ ಬಾಲಕಿಯ ರಕ್ಷಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.