ವಿಜಯಪುರ: ಶಾರ್ಟ್ ಸರ್ಕ್ಯೂಟ್ನಿಂದಾಗಿ ಇಲೆಕ್ಟ್ರಿಕಲ್ ಹಾಗೂ ಹಾರ್ಡ್ವೇರ್ ಅಂಗಡಿಯೊಂದು ಬೆಂಕಿಗಾಹುತಿಯಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಚಿದಾನಂದ ಹೊನ್ನಳ್ಳಿ ಎಂಬುವವರಿಗೆ ಸೇರಿದ ಅಂಗಡಿ ಇದಾಗಿದ್ದು, ತಡರಾತ್ರಿ ಹೊತ್ತಿದ ಬೆಂಕಿಗೆ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಅಂಗಡಿಯಲ್ಲಿದ್ದ ಇಲೆಕ್ಟ್ರಿಕಲ್ ವೈರ್, ಪೈಪ್ಗಳು, ಮನೆ ಕಟ್ಟಡದ ಸಾಮಗ್ರಿ ಸೇರಿ ಮತ್ತಿತರೆ ಉಪಕರಣಗಳು ನಾಶವಾಗಿದ್ದು, 10 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಹಾನಿಯಾಗಿವೆ.
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಈ ಸಂಬಂಧ ಕೂಡಗಿಯ ಎನ್ಟಿಪಿಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.