ETV Bharat / state

ವಿಜಯಪುರ:ಸಿದ್ದೇಶ್ವರ ಶ್ರೀಗಳ ಚಿತಾಕಟ್ಟೆ ದರ್ಶನ ಪಡೆದ ಸಿದ್ದಗಂಗಾ ಶ್ರೀ - ತುಮಕೂರಿನ ಶ್ರೀ ಸಿದ್ದಗಂಗಾ ಮಠ

ನಗರದ ಜ್ಞಾನ ಯೋಗಾಶ್ರಮಕ್ಕೆ ಭೇಟಿ ನೀಡಿದ ತುಮಕೂರಿನ ಶ್ರೀ ಸಿದ್ದಗಂಗಾ ಮಠದ ಮಠಾಧೀಶ ಸಿದ್ದಲಿಂಗ ಶ್ರೀಗಳು ಸಿದ್ಧೇಶ್ವರ ಶ್ರೀಗಳ ಚಿತಾಕಟ್ಟೆ ದರ್ಶನ ಪಡೆದರು.

Siddalinga Swamiji visits jnana yogashrama
ಸಿದ್ದೇಶ್ವರ ಶ್ರೀಗಳ ಚಿತಾಕಟ್ಟೆ ದರ್ಶನ ಪಡೆದ ಸಿದ್ದಗಂಗಾ ಶ್ರೀ
author img

By

Published : Jan 6, 2023, 4:05 PM IST

ಸಿದ್ದೇಶ್ವರ ಶ್ರೀಗಳ ಚಿತಾಕಟ್ಟೆ ದರ್ಶನ ಪಡೆದ ಸಿದ್ದಗಂಗಾ ಶ್ರೀ

ವಿಜಯಪುರ: ಶ್ರೀ ಸಿದ್ಧೇಶ್ವರ ಸ್ವಾಮೀಜಿ ಲಿಂಗ್ಯಕ್ಕರಾದ ಹಿನ್ನೆಲೆ ಜ್ಞಾನ ಯೋಗಾಶ್ರಮಕ್ಕೆ ತುಮಕೂರಿನ ಶ್ರೀ ಸಿದ್ದಗಂಗಾ ಮಠದ ಮಠಾಧೀಶ ಶ್ರೀ ಸಿದ್ದಲಿಂಗ ಸ್ವಾಮೀಜಿ ಭೇಟಿ ನೀಡಿ, ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಚಿತಾಕಟ್ಟೆ( ಅಂತ್ಯಕ್ರಿಯೆ ಮಾಡಿದ ಸ್ಥಳದ) ದರ್ಶನ ಪಡೆದರು.

ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಅಂತ್ಯಕ್ರಿಯೆ ಸಂದರ್ಭದಲ್ಲಿ ಕಾರಣಾಂತರದಿಂದ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಶುಕ್ರವಾರ ಜ್ಞಾನಯೋಗಾಶ್ರಮಕ್ಕೆ ಭೇಟಿ ನೀಡಿದ ಸಿದ್ಧಲಿಂಗ ಶ್ರೀಗಳು, ಸಿದ್ದೇಶ್ವರ ಶ್ರೀಗಳ ಚಿತಾಕಟ್ಟೆ ದರ್ಶನ ಮಾಡಿದರು. ಅಧ್ಯಾತ್ಮ ಲೋಕದಲ್ಲಿ ಸಿದ್ದೇಶ್ವರ ಶ್ರೀಗಳು ಭಾಸ್ಕರನಿದ್ದಂತೆ. ಆಧ್ಯಾತ್ಮ ಪ್ರವಚನದ ಮೂಲಕ ಮನಕುಲಕ್ಕೆ ಮಾದರಿಯಾಗಿದ್ದರು ಎಂದು ಗುಣಗಾನ ಮಾಡಿದರು.

ವಿಷಾದ ವ್ಯಕ್ತಪಡಿಸಿದ ಸ್ವಾಮೀಜಿ: ಸಿದ್ದೇಶ್ವರ ಶ್ರೀಗಳ ಅಂತ್ಯಸಂಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ ಸಿದ್ಧಲಿಂಗ ಶ್ರೀಗಳು, ಅನಿವಾರ್ಯ ಕಾರ್ಯಗಳಿಂದ ಶ್ರೀಗಳ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಆಗಿರಲಿಲ್ಲ. ಹೀಗಾಗಿ ಇಂದು ಆಗಮಿಸಿ ಚಿತಾಕಟ್ಟೆ ದರ್ಶನ ಪಡೆದಿದ್ದೇವೆ. ಸಾಧ್ಯವಾದರೆ ಚಿತಾಭಸ್ಮ ವಿಸರ್ಜನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದರು. ಅಲ್ಲದೇ ವಿಜಯಪುರ ನಗರದ ಜ್ಞಾನ ಯೋಗಾಶ್ರಮದಲ್ಲಿ ಶ್ರೀ ಸಿದ್ದಗಂಗಾ ಶ್ರೀಗಳು ಸಿದ್ದೇಶ್ವರ ಶ್ರೀಗಳ ಒಡನಾಟವನ್ನು ಸ್ಮರಿಸಿದರು.

ಜ್ಞಾನ ಯೋಗಾಶ್ರಮಕ್ಕೆ ಭಕ್ತರ ದಂಡು: ಸಿದ್ದೇಶ್ವರ ಶ್ರೀಗಳ‌ ಲಿಂಗೈಕ್ಯರಾಗಿ ಮೂರು ದಿನ‌ ಕಳೆದರೂ ಜ್ಞಾನ ಯೋಗಾಶ್ರಮಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ದಿನೇದಿನೆ ಹೆಚ್ಚುತ್ತಲೇ ಇದೆ.‌ ಶ್ರೀಗಳ ಅಗ್ನಿ ಸ್ಪರ್ಶ ಸ್ಥಳವನ್ನು ನೋಡಿ ಭಕ್ತಿ ಪರವಶರಾಗುತ್ತಿದ್ದಾರೆ. ಬರುವ ಭಕ್ತರು ವಿಭೂತಿ ತಂದು ಅದಕ್ಕೆ ಪೂಜೆ ನೇರವೇರಿಸಿ ಮನೆಗೆ ತೆಗೆದುಕೊಂಡು ಹೋಗುತ್ತಿದ್ದಾರೆ.

ನಿಲ್ಲದ ಅನ್ನ ದಾಸೋಹ: ಆಶ್ರಮಕ್ಕೆ ಆಗಮಿಸುವ ಭಕ್ತರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಪ್ರಸಾದ ಸ್ವೀಕರಿಸಿ ಭಕ್ತರು ಕೃತಾರ್ಥರಾಗುತ್ತಿದ್ದಾರೆ. ಶತಮಾನದ ಸಂತ ಸಿದ್ದೇಶ್ವರ ಸ್ವಾಮೀಜಿ: ಜ್ಞಾನಯೋಗಿ, ನಡೆದಾಡುವ ದೇವರೆಂದೇ ಖ್ಯಾತರಾದ ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಮಹಾಸ್ವಾಮಿಗಳು (81) ಜ.2ರಂದು ಇಹಲೋಕ ತ್ಯಜಿಸಿದ್ದಾರೆ. ಜಿಲ್ಲೆಯ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದಲ್ಲಿ ಜನಿಸಿದ್ದ ಸಿದ್ದೇಶ್ವರ ಮಹಾಸ್ವಾಮೀಜಿಗಳು ಎರಡನೇ ವಿವೇಕಾನಂದ ಎನಿಸಿಕೊಂಡಿದ್ದರು.

ಅಧ್ಯಾತ್ಮದ ಹಿನ್ನೆಲೆ: ವಿಜಯಪುರ ಜ್ಞಾನಯೋಗಾಶ್ರಮದ ಪರಮ ಪೂಜ್ಯರಾದ ಸಿದ್ಧೇಶ್ವರ ಸ್ವಾಮೀಜಿಗಳು ಆಧ್ಯಾತ್ಮದ ಬಗ್ಗೆ ತುಂಬ ಆಳವಾದ ಅಧ್ಯಯನ ಚಿಂತನೆಗಳನ್ನು ನಡೆಸಿದ್ದರು. ಶ್ರೇಷ್ಠ ಅನುಭಾವಿಗಳೂ, ಮಧುರ ಸ್ವಭಾವದವರೂ ಆಗಿದ್ದ ಅವರು, ಕನ್ನಡ, ಸಂಸ್ಕೃತ, ಇಂಗ್ಲಿಷ್, ಮರಾಠಿ ಮತ್ತು ಹಿಂದಿ ಭಾಷೆಗಳನ್ನೂ ಬಲ್ಲವರಾಗಿದ್ದರು.

ಅತ್ಯಂತ ಸರಳ ಸಜ್ಜನಿಕೆಯ ಸಾಕಾರ ಮೂರ್ತಿ, ನನ್ನದು - ತನ್ನದೆಂಬ ಮಮಕಾರ ತೊರೆದ ಮಹಾಪುರುಷರು ಸಿದ್ಧೇಶ್ವರ ಸ್ವಾಮಿಗಳು. ಇವರು ಸಂತರಷ್ಟೇ ಅಲ್ಲ, ಜ್ಞಾನೋಪಾಸಕರು ಕೂಡ. ಸಂತರು ನಾಡಿನಲ್ಲಿ ಬಹಳ ಜನ ಇದ್ದರು, ಈಗಲೂ ಇದ್ದಾರೆ. ಆದರೆ, ಜ್ಞಾನಯೋಗಿಗಳು ಬಹಳ ಅಪರೂಪ. ಅಂಥವರಲ್ಲೊಬ್ಬರು ಸಿದ್ಧೇಶ್ವರ ಸ್ವಾಮಿಗಳು.

ವಿಜಯಪುರದ ಜ್ಞಾನಯೋಗಾಶ್ರಮ ಜನತೆಗೆ ಜ್ಞಾನದಾಸೋಹ ನೀಡುವ ವಿಶಿಷ್ಟ ಕೇಂದ್ರ. ಗದುಗಿನ ಶಿವಾನಂದ ಶ್ರೀಗಳ ಪರಂಪರೆಯಲ್ಲಿ ಬಂದ ಈ ಆಶ್ರಮ ಇವರ ಗುರುಗಳಾದ ವೇದಾಂತ ಕೇಸರಿ ಮಲ್ಲಿಕಾರ್ಜುನ ಸ್ವಾಮಿಗಳ ಕಾಲದಲ್ಲಿ ಅತ್ಯಂತ ಪ್ರವರ್ಧಮಾನಕ್ಕೆ ಬಂತು. ಉತ್ತರ ಕರ್ನಾಟಕದ ಜನಮಾನಸದಲ್ಲಿ ಬಹಳವಾಗಿ ಮಹತ್ವ ಪಡೆಯಿತು.

ನಡೆದಾಡುವ ದೇವರು ಎಂದೇ ಪ್ರಸಿದ್ಧಿ: ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿ ವಿಜಯಪುರದ ಜೀವಂತ ನಡೆದಾಡುವ ದೇವರು ಎಂದು ಪ್ರಸಿದ್ಧರಾಗಿದ್ದರು. ಅವರ ಮಾಡಿದ ಭಾಷಣಗಳು ಪ್ರತಿಯೊಬ್ಬರ ಜೀವನದಲ್ಲಿ ಅದ್ಭುತ ರೂಪಾಂತರವನ್ನು ತರುತ್ತವೆ ಮತ್ತು ಅಂತಿಮವಾಗಿ ಶಾಂತಿಯುತ ಮತ್ತು ಸಂತೋಷದ ಜೀವನಕ್ಕೆ ಕಾರಣವಾಗುತ್ತದೆ. ಅವರ ಗುಣಗಳನ್ನು ವಿವರಿಸುವಲ್ಲಿ ಪದಗಳು ಕಡಿಮೆಯಾಗಬಹುದು. ಅವರ ಅನಿಸಿಕೆಗಳನ್ನು ಅನಕ್ಷರಸ್ಥರಿಂದಲೂ ಚೆನ್ನಾಗಿ ಅರ್ಥಪೂರ್ಣವಾಗಿ ಅರ್ಥೈಸಿಕೊಳ್ಳಬಹುದು. ಸಂತೋಷದಿಂದ ಸಾವಿರಾರು ಜನರು ಜೀವನವನ್ನು ನಡೆಸುವಂತೆ ಮಾಡಿರುವ ಶ್ರೇಯ ಅವರಿಗೆ ಸಲ್ಲುತ್ತದೆ.

ಇದನ್ನೂ ಓದಿ: ವಿರಮಿಸಿದ ವಿಜಯಪುರದ ವಿರಾಗಿ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀ ಅಗಲಿಕೆಯಿಂದ ಬಡವಾದ ಕರುನಾಡು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.