ಮುದ್ದೇಬಿಹಾಳ : ಭೋವಿ ಸಮಾಜಕ್ಕೆ ಮೀಸಲಾತಿ ಕಲ್ಪಿಸುವಂತೆ ಮುಖ್ಯಮಂತ್ರಿಗಳಿಗೆ ಬೇಡಿಕೆ ಇಡೋಣ, ಅದರ ಹೊರತುಪಡಿಸಿ ಬೇರೆ ಯಾವುದು ಬೇಡ ಎಂದು ಚಿತ್ರದುರ್ಗ, ಬಾಗಲಕೋಟೆ ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು.
ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕಲ್ಪಿಸದಿದ್ದರೆ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಬೇಕಾಗುತ್ತದೆ ಎಂಬ ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಶ್ರೀಗಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಪಂಚಮಸಾಲಿ ಶ್ರೀಗಳು ಏನು ಹೇಳಿಕೆ ಕೊಟ್ಟಿದ್ದಾರೆಯೋ ನಾನು ನೋಡಿಲ್ಲ.
ಈ ಕುರಿತು ನನಗೆ ಗೊತ್ತಿದ್ದರೆ ಪ್ರತಿಕ್ರಿಯಿಸಬಹುದಿತ್ತು ಎಂದು ವಿವಾದದಿಂದ ಅಂತರ ಕಾಯ್ದುಕೊಂಡರು. ಈ ವೇಳೆ ಯುವ ಸಂಘಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಪುಂಡಲೀಕ ಮುರಾಳ, ಕುಸ್ತಿಪಟು ರವಿಚಂದ್ರ ಹಡಲಗೇರಿ ಮೊದಲಾದವರು ಉಪಸ್ಥಿತರಿದ್ದರು.