ETV Bharat / state

ವಿರಮಿಸಿದ ವಿಜಯಪುರದ ವಿರಾಗಿ.. ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀ ಅಗಲಿಕೆಯಿಂದ ಬಡವಾದ ಕರುನಾಡು - Siddeshwara Swamiji life history

ವಿಜಯಪುರ ಜ್ಞಾನಯೋಗಾಶ್ರಮದ ಪರಮ ಪೂಜ್ಯರಾದ ಸಿದ್ಧೇಶ್ವರ ಸ್ವಾಮೀಜಿಗಳು ಇನ್ನಿಲ್ಲ - ಉಪನಿಷತ್ತುಗಳು, ಭಗವದ್ಗೀತೆ, ಯೋಗಸೂತ್ರ, ವಚನಶಾಸ್ತ್ರ ಸೇರಿ ಬೋಧಪ್ರದ ಪ್ರವಚನಗಳನ್ನು ನೀಡುತ್ತಿದ್ದ ಸ್ವಾಮೀಜಿ- ಮರೆಯಾದ ಭಕ್ತರ ಪಾಲಿನ ದೈವ

Siddeshwara Swamiji history
ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀ ಅಗಲಿಕೆ
author img

By

Published : Jan 2, 2023, 10:41 PM IST

Updated : Jan 3, 2023, 7:38 AM IST

ವಿಜಯಪುರ: ಜ್ಞಾನಯೋಗಿ, ನಡೆದಾಡುವ ದೇವರೆಂದೇ ಖ್ಯಾತರಾದ ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಮಹಾಸ್ವಾಮಿಗಳು (81) ಇಹಲೋಕ ತ್ಯಜಿಸಿದ್ದಾರೆ. ಜಿಲ್ಲೆಯ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದಲ್ಲಿ ಜನಿಸಿದ್ದ ಸಿದ್ದೇಶ್ವರ ಮಹಾಸ್ವಾಮೀಜಿಗಳು ಎರಡನೇ ವಿವೇಕಾನಂದ ಎನಿಸಿಕೊಂಡಿದ್ದರು.

ಶ್ರೀಗಳ ವಿದ್ಯಾಭ್ಯಾಸ: 1941ರ ಅಕ್ಟೋಬರ್ 24ರಂದು ಸಿದ್ದೇಶ್ವರ ಮಹಾಸ್ವಾಮೀಜಿಗಳು ಜನಿಸಿದ್ದರು. ಸ್ವಗ್ರಾಮ ಬಿಜ್ಜರಗಿಯ ಶಾಲೆಯಲ್ಲಿಯೇ ನಾಲ್ಕನೇ ತರಗತಿವರೆಗೆ ಓದಿದ ನಂತರ ಅವರು ಮಲ್ಲಿಕಾರ್ಜುನ ಸ್ವಾಮಿಗಳ ಬಳಿ ಬಂದಿದ್ದರು. 'ಬೆಳೆಯುವ ಪೈರು ಮೊಳಕೆಯಲ್ಲೇ' ಎಂಬಂತೆ ಬಾಲಕ ಸಿದ್ಧೇಶ್ವರನ ಚುರುಕುತನ ಮಲ್ಲಿಕಾರ್ಜುನ ಸ್ವಾಮಿಗಳ ಗಮನಕ್ಕೆ ಬರಲು ತಡವಾಗಲಿಲ್ಲ.

ಮಲ್ಲಿಕಾರ್ಜುನ ಸ್ವಾಮಿಗಳು ತಾವು ಪ್ರವಚನ ಮಾಡುವ ಸ್ಥಳಗಳಿಗೆ ಸಿದ್ಧೇಶ್ವರರನ್ನು ಕರೆದೊಯ್ಯ ತೊಡಗಿದರು. ಜೊತೆಯಲ್ಲಿಯೇ ಅವರ ಶಾಲಾ - ಕಾಲೇಜುಗಳ ವಿದ್ಯಾಭ್ಯಾಸವೂ ಮುಂದುವರಿಯುವಂತೆ ನೋಡಿಕೊಂಡರು. ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪದವಿ ನಂತರ ಸ್ನಾತಕೋತ್ತರ ವಿದ್ಯಾಭ್ಯಾಸಕ್ಕೆ ಕೊಲ್ಹಾಪುರ ವಿಶ್ವವಿದ್ಯಾನಿಲಯದಿಂದ ತತ್ವಶಾಸ್ತ ವಿಷಯದಲ್ಲಿ ಎಂಎ ಪದವಿಯನ್ನು ಉನ್ನತ ಶ್ರೇಣಿಯಲ್ಲಿ ಮಹಾಸ್ವಾಮಿಜಿಗಳು ಪಾಸ್​ ಮಾಡಿದ್ದರು.

ಆಧ್ಯಾತ್ಮದ ಹಿನ್ನೆಲೆ: ವಿಜಯಪುರ ಜ್ಞಾನಯೋಗಾಶ್ರಮದ ಪರಮ ಪೂಜ್ಯರಾದ ಸಿದ್ಧೇಶ್ವರ ಸ್ವಾಮೀಜಿಗಳು ಆಧ್ಯಾತ್ಮದ ಬಗ್ಗೆ ತುಂಬ ಆಳವಾದ ಅಧ್ಯಯನ ಚಿಂತನೆಗಳನ್ನು ನಡೆಸಿದ್ದರು. ಶ್ರೇಷ್ಠ ಅನುಭಾವಿಗಳೂ, ಮಧುರ ಸ್ವಭಾವದವರೂ ಆಗಿದ್ದ ಅವರು, ಕನ್ನಡ, ಸಂಸ್ಕೃತ, ಇಂಗ್ಲಿಷ್, ಮರಾಠಿ ಮತ್ತು ಹಿಂದಿ ಭಾಷೆಗಳನ್ನೂ ಬಲ್ಲವರಾಗಿದ್ದರು.

ಶತಮಾನದ ಸಂತ ಸಿದ್ದೇಶ್ವರ ಸ್ವಾಮೀಜಿ
ಶತಮಾನದ ಸಂತ ಸಿದ್ದೇಶ್ವರ ಸ್ವಾಮೀಜಿ

ಅತ್ಯಂತ ಸರಳ ಸಜ್ಜನಿಕೆಯ ಸಾಕಾರ ಮೂರ್ತಿ, ನನ್ನದು-ತನ್ನದೆಂಬ ಮಮಕಾರ ತೊರೆದ ಮಹಾಪುರುಷರು ಸಿದ್ಧೇಶ್ವರ ಸ್ವಾಮಿಗಳು. ಇವರು ಸಂತರಷ್ಟೇ ಅಲ್ಲ, ಜ್ಞಾನೋಪಾಸಕರು ಕೂಡ. ಸಂತರು ನಾಡಿನಲ್ಲಿ ಬಹಳ ಜನ ಇದ್ದರು, ಈಗಲೂ ಇದ್ದಾರೆ. ಆದರೆ, ಜ್ಞಾನಯೋಗಿಗಳು ಬಹಳ ಅಪರೂಪ. ಅಂಥವರಲ್ಲೊಬ್ಬರು ಸಿದ್ಧೇಶ್ವರ ಸ್ವಾಮಿಗಳು. ವಿಜಯಪುರದ ಜ್ಞಾನಯೋಗಾಶ್ರಮ ಜನತೆಗೆ ಜ್ಞಾನದಾಸೋಹ ನೀಡುವ ವಿಶಿಷ್ಟ ಕೇಂದ್ರ. ಗದುಗಿನ ಶಿವಾನಂದ ಶ್ರೀಗಳ ಪರಂಪರೆಯಲ್ಲಿ ಬಂದ ಈ ಆಶ್ರಮ ಇವರ ಗುರುಗಳಾದ ವೇದಾಂತ ಕೇಸರಿ ಮಲ್ಲಿಕಾರ್ಜುನ ಸ್ವಾಮಿಗಳ ಕಾಲದಲ್ಲಿ ಅತ್ಯಂತ ಪ್ರವರ್ಧಮಾನಕ್ಕೆ ಬಂತು. ಉತ್ತರ ಕರ್ನಾಟಕದ ಜನಮಾನಸದಲ್ಲಿ ಬಹಳವಾಗಿ ಮಹತ್ವ ಪಡೆಯಿತು.

ಶ್ರೀಗಳ ಜೀವನ ಶೈಲಿ ಹೇಗಿತ್ತು?: ಸಿದ್ದೇಶ್ವರ ಸ್ವಾಮಿಜಿಯವರು ಸರಳವಾದ ಸ್ಪೂರ್ತಿದಾಯಕ ಜೀವನ ಶೈಲಿಯನ್ನು ಹೊಂದಿದ್ದರು. ತತ್ವಜ್ಞಾನಿ, ಆಲೋಚಕ ಸ್ವಾಮೀಜಿ ಪ್ರಪಂಚದಾದ್ಯಂತ ಆಧ್ಯಾತ್ಮಿಕ ಪ್ರವಚನಗಳನ್ನು ವಿತರಿಸಿದ್ದಾರೆ. ಅವರು ತತ್ವಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಭಾರತದ ಸಂತರು ಮತ್ತು ಸಿಯರ್ಸ್ ಕೃತಿಗಳ ಆಧಾರದ ಮೇಲೆ ಹಲವಾರು ಪುಸ್ತಕಗಳನ್ನು ಅವರು ಬರೆದಿದ್ದಾರೆ.

ವೇದಾಂತ, ಗೀತಾ, ಯೋಗಸೂತ್ರ, ವಚನಗಳ ಕುರಿತಾದ ಶ್ರೀಗಳ ಉಪನ್ಯಾಸಗಳು ಅವುಗಳ ಮೂಲತೆ, ಚಿಂತನೆ, ಅಭಿವ್ಯಕ್ತಿಗಾಗಿ ಹೆಸರುವಾಸಿಯಾಗಿದೆ. ಸ್ವಾಮೀಜಿ ಅವರು ತಮ್ಮ ಪಂಥಜಿಯವರ 'ಪಥಜಲಿಯ ಯೋಗಶಾತ್ರ'ವನ್ನು ಮಹಾನ್ ಪಾಂಡಿತ್ಯಪೂರ್ಣ ಪಾಂಡಿತ್ಯದೊಂದಿಗೆ ಸಂಪಾದಿಸಿದ್ದರು. ಸಿದ್ಧೇಶ್ವರ ಸ್ವಾಮಿಜಿಯವರ ಸರಳತೆ, ಬೇರ್ಪಡುವಿಕೆ, ಯೋಗದ ಮನೋಭಾವಗಳು, ಸಹಾನುಭೂತಿ, ಆಧ್ಯಾತ್ಮಿಕ ಸಮಸ್ಯೆಗಳಿಗೆ ಸೃಜನಶೀಲ ವಿಧಾನ ಮತ್ತು ಅವರ ಹೋಲಿಸಲಾಗದ ಶಾಂತ ಮತ್ತು ಸಂಯೋಜನೆ ನಿಜವಾಗಿಯೂ ಪ್ರೇಕ್ಷಕರು ಉತ್ಸಾಹದಿಂದ ಮತ್ತು ಪ್ರಬುದ್ಧರಾಗಿದ್ದಾರೆ. ಅವರ ಪ್ರವಚನವು ಅವರ ನಿಖರತೆ ಮತ್ತು ನುಗ್ಗುವಿಕೆಗೆ ಹೆಸರುವಾಸಿಯಾಗಿತ್ತು.

ಪ್ರಶಸ್ತಿ - ಪುರಸ್ಕಾರಗಳು ತಿರಸ್ಕರಿಸಿದ್ದ ಶ್ರೀ: ಸಿದ್ದೇಶ್ವರ ಮಹಾಸ್ವಾಮಿಗಳನ್ನು ಅರಿಸಿ ಅನೇಕ ಪ್ರಶಸ್ತಿ ಮತ್ತು ಪುರಸ್ಕಾರಗಳು ಬಂದಿದ್ದವು. ಆದರೆ, ಅವುಗಳನ್ನು ವಿನಯದಲ್ಲೇ ಶ್ರೀಗಳು ತಿರಸ್ಕರಿಸುತ್ತಿದ್ದರು. ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀ ಪ್ರಶಸ್ತಿ ಬಂದಾಗ ಸಿದ್ದೇಶ್ವರ ಮಹಾಸ್ವಾಮಿಗಳು ಹೀಗೆ ಹೇಳಿದ್ದರು..

'ಭಾರತ ಸರ್ಕಾರ ನೀಡುವ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿಗಳ ಮೇಲೆ ನನಗೆ ಅಪಾರ ಗೌರವವಿದೆ. ಪದ್ಮಶ್ರೀ ಪ್ರಶಸ್ತಿ ಘೋಷಿಸಿದ್ದಕ್ಕೆ ಧನ್ಯವಾದಗಳು. ಆದರೆ, ನಾನೊಬ್ಬ ಸರಳ ವ್ಯಕ್ತಿ. ಸಾಮಾನ್ಯ ಜೀವನ ನಡೆಸುತ್ತ, ಆಧ್ಯಾತ್ಮಿಕ ಬೋಧನೆಯ ಮೂಲಕ ಜನರ ಜೀವನ ಉದಾತ್ತಗೊಳಿಸುವುದು ಉದ್ದೇಶ ನನ್ನದು. ಹಾಗಾಗಿ ಪ್ರಶಸ್ತಿಗಳ ಅವಶ್ಯತೆಯು ನನಗಿಲ್ಲ. ಎಲ್ಲ ಗೌರವಾಧರಗಳೊಂದಿಗೆ ಈ ಪ್ರಶಸ್ತಿಯನ್ನು ಹಿಂದಿರುಗಿಸುತ್ತಿದ್ದೇನೆ. ಅನ್ಯಥಾ ಭಾವಿಸದಿರಿ' ಎಂದ ಸಿದ್ದೇಶ್ವರ ಸ್ವಾಮೀಜಿಗಳು ಪದ್ಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸುವುದನ್ನು ನಿರಾಕರಿಸಿದ್ದರು.

ಶತಮಾನದ ಸಂತ ಸಿದ್ದೇಶ್ವರ ಸ್ವಾಮೀಜಿ
ಶತಮಾನದ ಸಂತ ಸಿದ್ದೇಶ್ವರ ಸ್ವಾಮೀಜಿ

ಗೌರವ ಡಾಕ್ಟರೇಟ್ ಸಹ ಸ್ವೀಕರಿಸಿರಲಿಲ್ಲ ಶ್ರೀಗಳು: ಕರ್ನಾಟಕ ವಿಶ್ವವಿದ್ಯಾಲಯ ಸಿದ್ದೇಶ್ವರ ಸ್ವಾಮೀಜಿಗಳಿಗೆ ಗೌರವ ಡಾಕ್ಟರೇಟ್ ಪ್ರಕಟಿಸಿತ್ತು. ಅದನ್ನೂ ಶ್ರೀಗಳು ಸ್ವೀಕರಿಸಿರಲಿಲ್ಲ. ಹೀಗೆ ತಮಗೆ ಸಂದ ಎಷ್ಟೋ ಪ್ರಶಸ್ತಿ ಮತ್ತು ಪುರಸ್ಕಾರಗಳನ್ನು ಅವರು ವಿನಮ್ರವಾಗಿಯೇ ನಿರಾಕರಿಸಿದ್ದಾರೆ. ಇದಕ್ಕೆ ಕಾರಣವೇನು? ಎಂಬ ಪ್ರಶ್ನೆಗೆ, 'ಶ್ರೀಗಳು ಆಧ್ಯಾತ್ಮ, ಆದರ್ಶ ಮತ್ತು ನೈತಿಕತೆ ಬಗ್ಗೆ ಕೇವಲ ಬೋಧನೆ ಮಾಡುವುದಷ್ಟೇ ಅಲ್ಲ. ಅವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದಾರೆ. ನುಡಿದಂತೆ ನಡೆಯುವ ಮತ್ತು ನಡೆದಂತೆಯೇ ನುಡಿಯುವ ವ್ಯಕ್ತಿತ್ವ ಅವರದ್ದಾಗಿತ್ತು' ಎಂದು ಸ್ವಾಮೀಜಿಯನ್ನು ಹತ್ತಿರದಿಂದ ಕಂಡಿರುವವರೊಬ್ಬರು ಸ್ಮರಿಸುತ್ತಾರೆ.

ಓದಿನ ಮೇಲೆ ಅಪಾರ ಪ್ರೀತಿ ಇತ್ತು: ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪದವಿ ನಂತರ ಸ್ನಾತಕೋತ್ತರ ವಿದ್ಯಾಭ್ಯಾಸಕ್ಕೆ ಕೊಲ್ಹಾಪುರ ವಿಶ್ವವಿದ್ಯಾನಿಲಯದಿಂದ ತತ್ವಶಾಸ್ತ ವಿಷಯದಲ್ಲಿ ಎಂಎ ಪದವಿಯನ್ನು ಶ್ರೀಗಳು ಉನ್ನತ ಶ್ರೇಣಿಯಲ್ಲಿ ಪಾಸ್​ ಮಾಡಿದ್ದರು. ಎಂಎ ಪದವಿಯ ಅಭ್ಯಾಸದ ಸಮಯದಲ್ಲಿ ಸಿದ್ಧೇಶ್ವರರರು ಕೊಲ್ಹಾಪುರದಲ್ಲಿ ವಿಜಯ ಪಾಟೀಲರ ಮನೆಯಲ್ಲಿ ವಾಸವಿದ್ದರು.

ಆ ಅವಧಿಯಲ್ಲಿಯೇ ತಮ್ಮ ಗುರುಗಳಾದ ಮಲ್ಲಿಕಾರ್ಜುನ ಸ್ವಾಮಿಗಳು ಮಾಡಿದ ಪ್ರವಚನಗಳನ್ನು ಒಂದುಗೂಡಿಸಿ 'ಸಿದ್ಧಾಂತ ಶಿಖಾಮಣಿ' ಎಂಬ ಪುಸ್ತಕ ಬರೆದು ಗುರುಗಳ ಹೆಸರಿನಲ್ಲೇ ಪ್ರಕಟಿಸಿದ್ದರು. ಆಗ ಅವರಿಗೆ ಕೇವಲ 19 ವರ್ಷ ಮಾತ್ರ ಆಗಿತ್ತೆಂಬುದು ಗಮನಾರ್ಹ. ಸಿದ್ದೇಶ್ವರರ ಮಾತು ಎಂದರೆ ಮಲ್ಲಿಕಾರ್ಜುನ ಸ್ವಾಮಿಗಳಿಗೆ ಬಲು ಪ್ರೀತಿ. ಆತ ಮಹಾ ಬುದ್ದಿವಂತ, ಆಧ್ಯಾತ್ಮಿಕದಂತೆ ಲೌಕಿಕ ವಿಷಯಗಳಲ್ಲೂ ವಿಶೇಷ ಪರಿಜ್ಞಾನವಿತ್ತು. ಮುಂದೆ ಜಗತ್ತಿಗೇ ದೊಡ್ಡವನಾಗುತ್ತಾನೆ ಎಂದು ವಿಶ್ವಾಸದಿಂದ ಎಲ್ಲರೆದುರು ಹೇಳುತ್ತಿದ್ದರು.

ಸ್ನಾತಕೋತ್ತರ ಪದವಿ ಪಡೆದು ವಿಜಯಪುರಕ್ಕೆ ಹಿಂದಿರುಗಿದ ನಂತರ ಸಿದ್ದೇಶ್ವರರಿಗೆ ಭಗವದ್ಗೀತೆ, ಉಪನಿಷತ್ತುಗಳ ಬಗ್ಗೆ ಮಲ್ಲಿಕಾರ್ಜುನ ಸ್ವಾಮಿಗಳು ವ್ಯಾಖ್ಯಾನವನ್ನು ನೀಡಿ ಅವರ ಜ್ಙಾನದಿಗಂತವನ್ನು ವಿಸೃತಗೊಳಿಸಿದ್ದರು. ಪೂಜ್ಯರು ಉಪನಿಷತ್ತುಗಳು, ಭಗವದ್ಗೀತೆ, ಯೋಗಸೂತ್ರ, ವಚನಶಾಸ್ತ್ರ ಮುಂತಾದ ವಿಷಯಗಳ ಬಗೆಗೆ ತಾವು ಹೇಗೆ ಗುರು ಮುಖೇನ ಕಲಿತ ಜ್ಙಾನವನ್ನು ಬಳಸಿಕೊಂಡು ಬೋಧಪ್ರದ ಪ್ರವಚನಗಳನ್ನು ನೀಡುತ್ತಿದ್ದರು. ಗಹನವಾದ ವೇದಾಂತ ತತ್ವಗಳನ್ನು ಅತ್ಯಂತ ಸರಳವಾಗಿ ಜನಮಾನಸದಲ್ಲಿ ಉಳಿಯುವಂತೆ ವಿವರಿಸುವುದೇ ಅವರ ವೈಶಿಷ್ಟ್ಯವಾಗಿತ್ತು.

ನಡೆದಾಡುವ ದೇವರು ಎಂದೇ ಪ್ರಸಿದ್ಧಿ: ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿ ವಿಜಯಪುರದ ಜೀವಂತ ನಡೆದಾಡುವ ದೇವರು ಎಂದು ಪ್ರಸಿದ್ಧರಾಗಿದ್ದರು. ಅವರ ಮಾಡಿದ ಭಾಷಣಗಳು ಪ್ರತಿಯೊಬ್ಬರ ಜೀವನದಲ್ಲಿ ಅದ್ಭುತ ರೂಪಾಂತರವನ್ನು ತರುತ್ತವೆ ಮತ್ತು ಅಂತಿಮವಾಗಿ ಶಾಂತಿಯುತ ಮತ್ತು ಸಂತೋಷದ ಜೀವನಕ್ಕೆ ಕಾರಣವಾಗುತ್ತದೆ. ಅವರ ಗುಣಗಳನ್ನು ವಿವರಿಸುವಲ್ಲಿ ಪದಗಳು ಕಡಿಮೆಯಾಗಬಹುದು. ಅವರ ಅನಿಸಿಕೆಗಳನ್ನು ಅನಕ್ಷರಸ್ಥರಿಂದಲೂ ಚೆನ್ನಾಗಿ ಅರ್ಥಪೂರ್ಣವಾಗಿ ಅರ್ಥೈಸಿಕೊಳ್ಳಬಹುದು. ಸಂತೋಷದಿಂದ ಸಾವಿರಾರು ಜನರು ಜೀವನವನ್ನು ನಡೆಸುವಂತೆ ಮಾಡಿರುವ ಶ್ರೇಯ ಅವರಿಗೆ ಸಲ್ಲುತ್ತದೆ.

Last Updated : Jan 3, 2023, 7:38 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.