ETV Bharat / state

ಸಿಂದಗಿ ಕ್ಷೇತ್ರದ ಜೆಡಿಎಸ್ ಘೋಷಿತ ಅಭ್ಯರ್ಥಿ ಹೃದಯಾಘಾತದಿಂದ ನಿಧನ

author img

By

Published : Jan 21, 2023, 7:48 AM IST

Updated : Jan 21, 2023, 11:01 AM IST

ಸಿಂದಗಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ ಸೋಮಜಾಳ ನಿಧನ. ತೀವ್ರ ಹೃದಯಾಘಾತದಿಂದ ಜೆಡಿಎಸ್ ಅಭ್ಯರ್ಥಿ ವಿಧಿವಶ.

ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟಿಲ ಸೋಮಜಾಳ
ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟಿಲ ಸೋಮಜಾಳ

ವಿಜಯಪುರ: ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆ ಸಿಂದಗಿ ಕ್ಷೇತ್ರದ ಘೋಷಿತ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ ಸೋಮಜಾಳ (54) ಹೃದಯಾಘಾತದಿಂದ ಶನಿವಾರ ಮಧ್ಯರಾತ್ರಿ ನಿಧನರಾಗಿದ್ದಾರೆ. ಕಳೆದ ರಾತ್ರಿ‌ ಅಸ್ವಸ್ಥಗೊಂಡಿದ್ದ ಶಿವಾನಂದ ಪಾಟೀಲ ಅವರನ್ನು ಸಿಂದಗಿ ಪಟ್ಟಣದ ವಾತ್ಸಲ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆಂದು ವೈದ್ಯರ ಪ್ರಕಟಿಸಿದ್ದಾರೆ.

ನಾಗಠಾಣ ಕ್ಷೇತ್ರದಲ್ಲಿ ‌ನಡೆದ ಜೆಡಿಎಸ್ ಪಂಚರತ್ನ ಕಾರ್ಯಕ್ರಮದಲ್ಲಿ ಮತ್ತು ವಿಜಯಪುರದ ನಗರದ ದರಬಾರ್ ಹೈಸ್ಕೂಲ್ ಮೈದಾನದಲ್ಲಿ ನಡೆದ ಸಾರ್ವಜನಿಕ ಸಮಾವೇಶ ಕಾರ್ಯಕ್ರಮದಲ್ಲಿ‌ ಮಾಜಿ ಸಿಎಂ ಕುಮಾರಸ್ವಾಮಿ ಅವರೊಂದಿಗೆ ಇವರು ಶುಕ್ರವಾರ ಭಾಗಿಯಾಗಿದ್ದರು. ಬಳಿಕ ರಾತ್ರಿ ಸಂಬಂಧಿಕರೊಬ್ಬರ ಮನೆಗೆ ಹೋದಾಗ, ಕುಡಿಯಲು ನೀರು ಕೇಳುತ್ತಲೇ ತಲೆಸುತ್ತಿ ಕುಸಿದು ಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ಸಾಗಿಸಿದಾಗ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಖಚಿತಪಡಿಸಿದ್ದಾರೆ. ಪತ್ನಿ ವಿಶಾಲಾಕ್ಷಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಶಿವಾನಂದ ‌ಪಾಟೀಲ್ ಸೋಮಜಾಳ ಅಗಲಿದ್ದಾರೆ.

ಸಿಂದಗಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ: ವಿಜಯಪುರ ಜಿಲ್ಲೆ ಆಲಮೇಲ ತಾಲೂಕಿನ ಸೋಮಜಾಳ ಗ್ರಾಮದ‌ ಮೂಲದವರು. ಹದಿನಾರು ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾಗಿ, ಇತ್ತೀಚಿನ‌ ವರ್ಷಗಳಲ್ಲಿ ರಾಜಕೀಯದಲ್ಲಿ ಗುರುತಿಸಿಕೊಂಡಿದ್ದರು. ಹುಬ್ಬಳ್ಳಿಯಲ್ಲಿ ಸೆಕ್ಯೂರಿಟಿ ಏಜೆನ್ಸಿಯೊಂದನ್ನು ಕೂಡ ಇವರು ನಡೆಸುತ್ತಿದ್ದರು. ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದಿಂದ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಶಿವಾನಂದ ಪಾಟೀಲ ಅವರಿಗೆ ಜೆಡಿಎಸ್ ಟಿಕೆಟ್ ಘೋಷಿಸಿತ್ತು. ಅದಕ್ಕಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದರು. ಕಳೆದ ಜ.18 ರಂದು ಪಂಚರತ್ನ ರಥಯಾತ್ರೆಯನ್ನು ಸಿಂದಗಿಯಲ್ಲಿ ಯಶಸ್ವಿಯಾಗಿಸಿದ್ದರು. ಮೂಲ ಬಿಜೆಪಿಗರಾಗಿದ್ದ ಪಾಟೀಲರು ಇತ್ತೀಚೆಗೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.

ಜೆಡಿಎಸ್ ನಾಯಕತ ಸಂತಾಪ: ಪಾಟೀಲರ ನಿಧನಕ್ಕೆ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ನಾಯಕರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸಂತಾಪ ಸೂಚಿಸಿದ ಕುಮಾರಸ್ವಾಮಿ: ಸಿಂದಗಿ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಶಿವಾನಂದ ಪಾಟೀಲ ಅವರ ಅಕಾಲಿಕ ಮರಣ ನನಗೆ ತೀವ್ರ ಆಘಾತ ಉಂಟುಮಾಡಿದೆ. ಸೇನೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ ನಿವೃತ್ತಿ ಪಡೆದಿದ್ದ ಪಾಟೀಲರು, ಸಮಾಜ ಸೇವೆಯ ಅದಮ್ಯ ಹಂಬಲ ಹೊಂದಿದ್ದರು. ಅತ್ಯುತ್ತಮ ಸಂಘಟನಾ ಶಕ್ತಿ, ಕ್ರಿಯಾಶೀಲತೆ ಹೊಂದಿದ್ದ ಅವರು ಪರಿಚಯವಾದ ಅಲ್ಪಕಾಲದಲ್ಲಿಯೇ ನನಗೆ ಅತ್ಯಂತ ಆತ್ಮೀಯರಾಗಿದ್ದರು. ಶಿವಾನಂದ ಪಾಟೀಲರ ಅಗಲಿಕೆ ನನಗೆ ವೈಯಕ್ತಿಕವಾಗಿ ಅತೀವ ದುಃಖ ಉಂಟು ಮಾಡಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.

ಶನಿವಾರವಷ್ಟೇ ಕುಮಾರಸ್ವಾಮಿ ಜೊತೆ ಕಾರ್ಯಕ್ರಮದಲ್ಲಿ ಭಾಗಿ: ಸದ್ಯ ವಿಜಯಪುರ ಜಿಲ್ಲೆಯಲ್ಲಿರುವ ಜೆಡಿಎಸ್ ಪಂಚರತ್ನ ಯಾತ್ರೆಯಲ್ಲಿ ಶಿವಾನಂದ ಪಾಟೀಲ ಅವರು ಶನಿವಾರವಷ್ಟೇ ಕುಮರಸ್ವಾಮಿ ಜೊತೆ ಭಾಗವಹಿಸಿದ್ದರು. ಮೂರು ದಿನಗಳ ಹಿಂದೆ ತಮ್ಮ ಕ್ಷೇತ್ರದಲ್ಲೇ ಯಾತ್ರೆಯನ್ನು ಭರ್ಜರಿಯಾಗಿ ನಡೆಸಿದ್ದರು.

Last Updated : Jan 21, 2023, 11:01 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.