ವಿಜಯಪುರ: ಕೊರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆಯಾಗಿ ಜಿಲ್ಲಾಡಳಿತ ಎಷ್ಟೇ ಕಠಿಣ ಕ್ರಮ ಕೈಗೊಳ್ಳುತ್ತಿದ್ದರೂ ಜನ ಮಾತ್ರ ತಮಗೂ ವೈರಸ್ಗೂ ಸಂಬಂಧವಿಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ.
ಇಂದು ನಗರದ ಕೇಂದ್ರ ಬಸ್ ನಿಲ್ದಾಣದಿಂದ ಗೋದಾವರಿ ಬಳಿಯ ಸ್ಯಾಟ್ಲೈಟ್ ಬಸ್ ನಿಲ್ದಾಣಕ್ಕೆ ಹೋಗುತ್ತಿದ್ದ ಸಿಟಿ ಬಸ್ನಲ್ಲಿ ಸಾಮಾಜಿಕ ಅಂತರ ಉಲ್ಲಂಘಿಸಲಾಗಿದೆ. ಬಸ್ ನಲ್ಲಿ ಕೋವಿಡ್ ನಿಯಮ ಮೀರಿ ಪ್ರಯಾಣಿಕರನ್ನು ಹತ್ತಿಸಿಕೊಂಡು ಹೋಗಿರುವ ದೃಶ್ಯವನ್ನು ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ.

ಮಾಸ್ಕ್ ಹಾಕದವರಿಗೆ ನಗರ ಪ್ರದೇಶದಲ್ಲಿ 1000 ಹಾಗೂ ಗ್ರಾಮೀಣ ಭಾಗದಲ್ಲಿ 500 ರೂ. ದಂಡ ವಿಧಿಸಿರುವ ದಿನವೇ ಈ ಸಿಟಿ ಬಸ್ ನಿಲ್ದಾಣದಲ್ಲಿ ಅರ್ಧಂಬರ್ಧ ಮಾಸ್ಕ್ ಹಾಕಿಕೊಂಡವರು ಹೆಚ್ಚಾಗಿ ಕಂಡು ಬಂದಿದ್ದಾರೆ. ಬಸ್ ಚಾಲಕನೂ ಸಹ ಸರಿಯಾಗಿ ಮಾಸ್ಕ್ ಧರಿಸದೇ ನಿಯಮ ಉಲ್ಲಂಘಿಸಿದ್ದಾರೆ ಎನ್ನಲಾಗಿದೆ.