ವಿಜಯಪುರ: ಹೊಸ ವರ್ಷಾಚರಣೆಯ ಹಿನ್ನೆಲೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಇಲ್ಲಿನ ವಿವಿಧ ಇಲಾಖೆಯ ಸಿಬ್ಬಂದಿ ಡಿಸಿ ಅವರಿಗೆ ಹೂ ಗುಚ್ಛ ನೀಡುವ ಮೂಲಕ ಶುಭಾಶಯ ತಿಳಿಸಿದರು.
ಕಂದಾಯ, ಶಿಕ್ಷಣ, ಆರೋಗ್ಯ ಸೇರಿದಂತೆ ಅನೇಕ ಇಲಾಖೆ ಸಿಬ್ಬಂದಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಅವರಿಗೆ ಸಿಹಿ ತಿನ್ನಿಸಿ ಹೊಸ ವರ್ಷದ ಶುಭಾಶಯ ಕೋರಿದರು. ಬೆಳಿಗ್ಗೆಯಿಂದಲೂ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸುತ್ತಿರುವ ಅಧಿಕಾರಿಗಳು ಶುಭ ಕೋರುತ್ತಿದ್ದಾರೆ. ಇನ್ನು ಜಿಲ್ಲಾಧಿಕಾರಿಗಳು ಸಹ ಪ್ರತಿಯಾಗಿ ಬಂದ ಅಧಿಕಾರಿಗಳಿಗೆ ಶುಭಾಶಯ ತಿಳಿಸಿದರು.