ವಿಜಯಪುರ: ಜಿಲ್ಲಾಡಳಿತದ ನಿಷೇಧದ ಮಧ್ಯೆಯೂ ಬಬಲೇಶ್ವರ ತಾಲೂಕಿನ ಕಾಖಂಡಕಿಯಲ್ಲಿ ನಡೆದ ಕಾರ ಹುಣ್ಣಿಮೆ ಎತ್ತು ಬೆದರಿಸುವ ಸ್ಫರ್ಧೆ ವೇಳೆ ಪೊಲೀಸ್ ಜೀಪ್ ಮೇಲೆ ಕಲ್ಲು ತೂರಾಟ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
![stone throwing on police jeep](https://etvbharatimages.akamaized.net/etvbharat/prod-images/7640715_566_7640715_1592307130765.png)
ಅನಗತ್ಯವಾಗಿ ಗಲಾಟೆ ಮಾಡಿದ್ದ 8 ಜನರ ಮೇಲೆ ಬಬಲೇಶ್ವರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 353, 269, 270ರ ಅಡಿಯಲ್ಲಿ 8 ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಘಟನೆ ಹಿನ್ನೆಲೆ: ಜೂ. 11ರಂದು ಬಬಲೇಶ್ವರ ತಾಲೂಕಿನ ಕಾಖಂಡಕಿಯಲ್ಲಿ ನಿಷೇಧದ ನಡುವೆಯೂ ಕಾರ ಹುಣ್ಣಿಮೆ ಹಬ್ಬ ಆಚರಣೆ ಮಾಡಲಾಗಿತ್ತು. ಈ ವೇಳೆ ಕಾರ್ಯಕ್ರಮ ತಡೆಯಲು ಸ್ಥಳಕ್ಕೆ ತೆರಳಿದ್ದ ಪೊಲೀಸ್ ಜೀಪ್ ಮೇಲೆ ಕೆಲ ಕಿಡಿಗೇಡಿಗಳು ಕಲ್ಲು ತೂರಿದ್ದರು. ಈ ವೇಳೆ ಪೊಲೀಸ್ ಜೀಪ್ ಗಾಜು ಒಡೆದು ಜಖಂ ಆಗಿತ್ತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿ ಬಳಿಕ ಕಾರ್ಯಕ್ರಮವನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದರು.