ವಿಜಯಪುರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣನಾಗಿದ್ದಕ್ಕೆ ವಿದ್ಯಾರ್ಥಿಯೊಬ್ಬ ಮನನೊಂದು ನೇಣಿಗೆ ಶರಣಾದ ಘಟನೆ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ನಡೆದಿದೆ.
ಖುಷಾಲ್ ಹುಲಕಂಟೆಪ್ಪ ಕಲ್ಲೂರ (17) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಸಿಂದಗಿ ಪಟ್ಟಣದ ಹೆಚ್.ಜಿ. ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ.
ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.