ETV Bharat / state

ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗಿ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿಗೆ ಬೈಕ್​ ಡಿಕ್ಕಿ: ಚಿಕಿತ್ಸೆ ಫಲಿಸದೆ ಸಾವು - ಶಾಪೇಟ್

ಶಾಲೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಂಡು ಮನೆಗೆ ಮರಳುತ್ತಿದ್ದ ವಿದ್ಯಾರ್ಥಿಗೆ ಬೈಕ್​ ಡಿಕ್ಕಿಯಾಗಿ ಮೃತಪಟ್ಟಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

student-died-of-road-accident-at-vijaypur
ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗಿ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿಗೆ ಬೈಕ್​ ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೇ ಸಾವು
author img

By

Published : Aug 15, 2023, 9:41 PM IST

ವಿಜಯಪುರ : ಶಾಲೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡು ಮನೆಗೆ ಮರಳುತ್ತಿದ್ದಾಗ ಅಪರಿಚಿತ ಬೈಕ್​ ಡಿಕ್ಕಿಯಾಗಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಾಪೇಟ್​ ಬಳಿ ಇಂದು ನಡೆದಿದೆ. ಮೃತ ವಿದ್ಯಾರ್ಥಿಯನ್ನು ನೀತುನ್​ ಕಾಂಬಳೆ (7) ಎಂದು ಗುರುತಿಸಲಾಗಿದೆ. ಬೈಕ್​ ಸವಾರ ಸ್ಥಳದಿಂದ ಪರಾರಿಯಾಗಿದ್ದಾನೆ.

ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಬಾಲಕ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. ವಿಜಯಪುರ ಸಂಚಾರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆ ಅಪಘಾತ- ಇಬ್ಬರು ವಿದ್ಯಾರ್ಥಿಗಳು ಸಾವು : ಇತ್ತೀಚೆಗೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಡಮಲಕುಂಟೆ ಗ್ರಾಮದ ಬಳಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡಿದ್ದರು. ಬೈಕ್ ಹಾಗೂ ಪಿಕಪ್ ವಾಹನದ ನಡುವೆ ಡಿಕ್ಕಿ ಸಂಭವಿಸಿತ್ತು. ಮೃತರನ್ನು ಈಶ್ವರ್ (16) ಯಶ್ವಂತ್ (17) ಎಂದು ಗುರುತಿಸಲಾಗಿತ್ತು. ರಾಮು ಎಂಬವರ ಸ್ಥಿತಿ ಗಂಭೀರವಾಗಿತ್ತು. ಈ ವಿದ್ಯಾರ್ಥಿಗಳು ಆಂಧ್ರಪ್ರದೇಶದ ರೊದ್ದಂ ಮಂಡಲದ ಚಿನ್ನಿಕೊಡಿಪಲ್ಲಿ ನಿವಾಸಿಗಳಾಗಿದ್ದರು.

ಇದನ್ನೂ ಓದಿ : Rajasthan Accident: ನಿಂತಿದ್ದ ಕಂಟೇನರ್‌ಗೆ ಬೊಲೆರೋ ಡಿಕ್ಕಿ: ರಾಜಸ್ಥಾನದಲ್ಲಿ ಒಂದೇ ಕುಟುಂಬದ 6 ಮಂದಿ ಸಾವು!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.