ETV Bharat / state

ಕಾನೂನು ಪದವಿ ಪರೀಕ್ಷೆ ಮುಂದೂಡುವಂತೆ ಮನವಿ ಸಲ್ಲಿಸಿದ ವಿದ್ಯಾರ್ಥಿಗಳು - Vijayapura

ಕಾನೂನು ಪದವಿ ಪರೀಕ್ಷೆ ಮುಂದೂಡುವಂತೆ ಕಾನೂನು ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

Vijayapura
ಕಾನೂನು ಪದವಿ ವ್ಯಾಸಂಗದ ವಿದ್ಯಾರ್ಥಿಗಳಿಂದ ಮನವಿ
author img

By

Published : Aug 18, 2020, 4:40 PM IST

ವಿಜಯಪುರ: ಕಾನೂನು ಪದವಿ ಪರೀಕ್ಷೆ ಮುಂದೂಡುವಂತೆ ಕಾನೂನು ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಸೆಪ್ಟೆಂಬರ್ 21ರಂದು ಕಾನೂನು ಪದವಿ ಪರೀಕ್ಷೆ ನಡೆಸಲು ಆದೇಶ ಹೊರಡಿಸಲಾಗಿದೆ. ಆದರೆ ಕೊರೊನಾ ಭೀತಿಯಿಂದ ಸರಿಯಾಗಿ ತರಗತಿಗಳು ನಡೆಯದೆ ಬೋಧನಾ ಚಟುವಟಿಕೆಗಳು ಪೂರ್ಣ ಪ್ರಮಾಣದಲ್ಲಿ ನಡೆದಿಲ್ಲ‌. ಇತ್ತ ಕಾಲೇಜು ಆಡಳಿತ ಮಂಡಳಿಗಳು, ಸರ್ಕಾರ ಇದುವರೆಗೂ ವಿದ್ಯಾರ್ಥಿಗಳ ಪರೀಕ್ಷಾ ಹಿತದೃಷ್ಟಿಯಿಂದ ಯಾವುದೇ ಆನ್‌ಲೈನ್ ತರಗತಿ ನಡೆಸಿಲ್ಲ.

ಕಾನೂನು ಪದವಿ ಪರೀಕ್ಷೆ ಮುಂದೂಡುವಂತೆ ವಿದ್ಯಾರ್ಥಿಗಳ ಮನವಿ

ಕೆಲವು ಪ್ರದೇಶಗಳಲ್ಲಿ ಕೊರೊನಾ ಸೋಂಕಿತರು ಹೆಚ್ಚಾಗಿರುವ ಕಾರಣದಿಂದ ವಿದ್ಯಾರ್ಥಿಗಳಿಗೆ ಓದಲು ಅನಾನುಕೂಲವಾಗಿದೆ. ದಿಢೀರ್ ಪರೀಕ್ಷಾ ದಿನಾಂಕ ನಿರ್ಧಾರ ಮಾಡಿರೋದರಿಂದ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ ಎಂದು ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗೆ ಮನವರಿಕೆ ಮಾಡಿದರು.

ಸರ್ಕಾರ ಪರೀಕ್ಷೆಯ ದಿನಾಂಕ ಕನಿಷ್ಠ ಒಂದು ತಿಂಗಳ ಮಟ್ಟಿಗೆ ಮುಂದೂಡಿ ಬಾಕಿ ಉಳಿದ ತರಗತಿ ನಡೆಸಿ ಬಳಿಕ ಕಾನೂನು ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವಂತೆ ಒತ್ತಾಯಿಸಿ ಕಾನೂನು ವಿದ್ಯಾರ್ಥಿಗಳ ಒಕ್ಕೂಟದಿಂದ ಜಿಲ್ಲಾಧಿಕಾರಿ ಮೂಲಕ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದರು.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.