ETV Bharat / state

ವಿಜಯಪುರದಲ್ಲಿ ಹಿಜಾಬ್ ಧರಿಸಿಯೇ ತರಗತಿಗೆ ಹಾಜರು: ಪ್ರತಿಭಟನೆ ನಡೆಸಿ ಮನೆಗೆ ವಾಪಸ್‌

ವಿಜಯಪುರ ನಗರದ ಸರ್ಕಾರಿ ಪದವಿಪೂರ್ವ ಮತ್ತು ಪದವಿ ಮಹಾವಿದ್ಯಾಲಯದಲ್ಲಿ ಇಂದು ಬೆಳಗ್ಗೆ ವಿದ್ಯಾರ್ಥಿನಿಯರು ಹಿಜಾಬ್​, ಬುರ್ಖಾ​ ಧರಿಸಿ ಬಂದಿದ್ದರು.

students protest in front of colleges for hijab in vijayapura
ಹಿಜಾಬ್ ಧರಿಸಿಯೇ ತರಗತಿಗಳಿಗೆ ಹಾಜರಾದ ವಿದ್ಯಾರ್ಥಿನಿಯರು
author img

By

Published : Feb 16, 2022, 10:43 AM IST

Updated : Feb 16, 2022, 10:53 AM IST

ವಿಜಯಪುರ: ವಿಜಯಪುರ ‌ಜಿಲ್ಲೆಯಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ತಾರಕಕ್ಕೇರಿದೆ. ನಗರದ ಸರ್ಕಾರಿ ಪದವಿಪೂರ್ವ ಮತ್ತು ಪದವಿ ಮಹಾವಿದ್ಯಾಲಯದಲ್ಲಿ ಬೆಳಗ್ಗೆ ವಿದ್ಯಾರ್ಥಿನಿಯರು ಹಿಜಾಬ್​, ಬುರ್ಖಾ​ ಧರಿಸಿ ಬಂದಿದ್ದು ಗೊಂದಲ ಸೃಷ್ಟಿಸಿತು.‌

ನ್ಯಾಯಾಲಯದ ಅಂತಿಮ ತೀರ್ಪು ಬರುವವರೆಗೂ ಸಮವಸ್ತ್ರ ನೀತಿ ಪಾಲನೆ ಕಡ್ಡಾಯ. ಆದ್ರೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ತರಗತಿಗಳಿಗೆ ಹಾಜರಾದರು. ಸರ್ಕಾರದ ಸಮವಸ್ತ್ರ ನೀತಿ ಸಂಹಿತೆ ಪಾಲಿಸಬೇಕೆಂದು ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ವಿದ್ಯಾರ್ಥಿನಿಯರು ತರಗತಿಯೊಳಗೆ ಹಿಜಾಬ್ ತೆಗೆದು ಹಾಜರಾಗಬೇಕೆಂದು ಸೂಚನೆ ನೀಡಿದರೂ ಸಹ ಕೇಳದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ತರಗತಿಗಳಲ್ಲಿ ಕುಳಿತರು.

ಹಿಜಾಬ್​ಗಾಗಿ ಪ್ರತಿಭಟನೆ

ಪ್ರತಿಭಟನೆ: ಹಿಜಾಬ್ ತೆಗೆದು ತರಗತಿಗೆ ಬರುವಂತೆ ಶಿಕ್ಷಕರು ಸೂಚನೆ ನೀಡಿದ ಕಾರಣ ವಿದ್ಯಾರ್ಥಿನಿಯರು ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದರು. ‌ನಾವು ಯಾವುದೇ ಕಾರಣಕ್ಕೂ ಹಿಜಾಬ್ ತೆಗೆಯೋದಿಲ್ಲ ಎಂದು ಪಟ್ಟು ಹಿಡಿದರು.‌ ನಮಗೆ ಶಿಕ್ಷಣವೂ ಬೇಕು, ಹಿಜಾಬ್ ಕೂಡಾ ಬೇಕು ಎಂದು ಪಟ್ಟು ಹಿಡಿದರು. ಆದರೆ, ‌ಹಿಜಾಬ್ ಇದ್ದರೆ ಪ್ರವೇಶ ಇಲ್ಲ ಎಂದು ಶಿಕ್ಷಕರು ಸ್ಪಷ್ಟಪಡಿಸಿದ್ದು, ವಿದ್ಯಾರ್ಥಿನಿಯರು ಮನೆಗೆ ವಾಪಸ್ಸಾದರು.

ಇದನ್ನೂ ಓದಿ: ಹಿಜಾಬ್ ಧರಿಸಿಯೇ ಶಾಲೆಗೆ ವಿದ್ಯಾರ್ಥಿನಿಯರ ಆಗಮನ: ಬೆಳಗಾವಿಯಲ್ಲಿ ಪೊಲೀಸ್ ಬಿಗಿ ಭದ್ರತೆ

ಯಾವುದೇ ಅಹಿತಕರ ಘಟನೆ ನಡೆಯದಂತೆ ಗಾಂಧಿ ಚೌಕ್ ಠಾಣೆ ಪೊಲೀಸರು ಸರ್ಕಾರಿ ಕಾಲೇಜಿಗೆ ಹೆಚ್ಚಿನ ಭದ್ರತೆ ಒದಗಿಸಿದ್ದಾರೆ.

Last Updated : Feb 16, 2022, 10:53 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.