ವಿಜಯಪುರ: ರಾಜ್ಯ ಸರ್ಕಾರ ಹಿಂದುಳಿದ ಕಲ್ಯಾಣ ಇಲಾಖೆಯ 2019-20ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮಂಜೂರಾತಿಗೆ ಹೊಸ ವಿದ್ಯಾರ್ಥಿಗಳನ್ನು ಪರಿಗಣಿಸುವುದಿಲ್ಲ ಎಂದು ಆದೇಶ ಹೊರಡಿಸಿದೆ. ಇದನ್ನು ಖಂಡಿಸಿ ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆ ವಿಜಯಪುರದಲ್ಲಿ ಪ್ರತಿಭಟನೆ ನಡೆಸಿತು.
ನಗರದ ಗಾಂಧಿ ವೃತದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ರು. ಸರ್ಕಾರದ ಆದೇಶದಿಂದ 2 ರಿಂದ 10ನೇ ತರಗತಿ ವಿದ್ಯಾರ್ಥಿಗಳು ಈ ಯೋಜನೆಯಿಂದ ಹೊರ ಉಳಿಯುವಂತಾಗಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ಅನುದಾನ ಕೊರತೆ ನೆಪವೊಡ್ಡಿ ವಿದ್ಯಾರ್ಥಿಗಳ ಶಿಷ್ಯ ವೇತನ ಕಡಿತಗೊಳಿಸುವುದು ಸರಿಯಲ್ಲ. ರಾಜ್ಯದ ಅನೇಕ ಬಡ ವಿದ್ಯಾರ್ಥಿಗಳಿಗೆ ಸರ್ಕಾರದ ಆದೇಶದಿಂದ ಹೊರೆಯಾಗುತ್ತದೆ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಕಳವಳ ವ್ಯಕ್ತಪಡಿಸಿದರು.