ವಿಜಯಪುರ: ಸರ್ಕಾರಿ ಕಾಲೇಜುಗಳಲ್ಲಿ ಪದವಿ ವ್ಯಾಸಂಗ ನಡೆಸುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ, ಲ್ಯಾಪ್‌ಟಾಪ್ ನೀಡುವಂತೆ ಜಿಲ್ಲಾಧಿಕಾರಿಗೆ ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು.
ಈ ಹಿಂದಿನ ಸರ್ಕಾರದ ಆಡಳಿತ ಅವಧಿಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ನೀಡುತ್ತೇವೆ ಎಂದು ಕಳೆದ ವರ್ಷ ಯೋಜನೆ ಜಾರಿಗೆ ತಂದಿದ್ದಾರೆ. ಆದರೆ ಇದೀಗ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಮಾತ್ರ ಲ್ಯಾಪ್‌ಟಾಪ್ ವಿತರಣೆ ಮಾಡುತ್ತಿದೆ ಎಂದು ವಿದ್ಯಾರ್ಥಿಗಳು ಅಸಮಧಾನ ಹೊರ ಹಾಕಿದರು.
ಬಳಿಕ ಈ ಕುರಿತು ಪದವಿಯ ಅಂತಿಮ ವರ್ಷದವರಿಗೂ ಎಲ್ಲಾ ವಿದ್ಯಾರ್ಥಿಗಳಿಗೆ ಸರ್ಕಾರ ಉಚಿತವಾಗಿ ಲ್ಯಾಪ್‌ಟಾಪ್ ನೀಡುಬೇಕೆಂದು ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.