ವಿಜಯಪುರ: ಜಿಲ್ಲಾ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಸಾರವಾಡ ಮತಕ್ಷೇತ್ರ ಸದಸ್ಯೆ ಸುಜಾತಾ ಸೋಮನಾಥ ಕಳ್ಳಿಮನಿ ಆಯ್ಕೆಯಾಗಿದ್ದಾರೆ. ಈ ಮೂಲಕ ಆಡಳಿತಾರೂಢ ಬಿಜೆಪಿಗೆ ಭಾರಿ ಮುಖಭಂಗವಾಗಿದೆ.
42 ಸದಸ್ಯರ ಬಲವಿರುವ ವಿಜಯಪುರ ಜಿಲ್ಲಾ ಪಂಚಾಯಿತಿಯಲ್ಲಿ, ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಸದಸ್ಯೆ ಸುಜಾತಾ ಕಳ್ಳಿಮನಿ ಹಾಗೂ ಬಿಜೆಪಿಯ ಭೀಮಾಶಂಕರ ಬಿರಾದಾರ ನಾಮಪತ್ರ ಸಲ್ಲಿಸಿದ್ದರು.
ಬಿಜೆಪಿಯ ನಾಲ್ವರು ಜಿ.ಪಂ ಸದಸ್ಯರು ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಸೂಚಿಸಿದ ಕಾರಣ, ಕಾಂಗ್ರೆಸ್ ಸದಸ್ಯೆಗೆ 22 ಮತಗಳು ದೊರೆಯುವ ಮೂಲಕ ಆಯ್ಕೆಯಾದರು. ಬಿಜೆಪಿ ಅಭ್ಯರ್ಥಿ ಭೀಮಾಶಂಕರ ಬಿರಾದಾರ ಅವರಿಗೆ 20 ಮತ ತೆಗೆದುಕೊಳ್ಳಲು ಸಾಧ್ಯವಾಯಿತು.
ಇನ್ನು ಕಾಂಗ್ರೆಸ್‌ನ ಮೂವರು ಸದಸ್ಯರು ಬಿಜೆಪಿ ಪರವಾಗಿ ಮತ ಚಲಾವಣೆ ಮಾಡಿದ್ದು, ಆದರೆ ಕಾಂಗ್ರೆಸ್ಗೆ ಜೆಡಿಎಸ್ ಮೂವರು ಸದಸ್ಯರು ಬೆಂಬಲ ನೀಡಿದರು. ಈ ಹಿನ್ನೆಲೆ ಅಭ್ಯರ್ಥಿ ಸುಲಭವಾಗಿ ಜಯಗಳಿಸಿದರು.