ETV Bharat / state

ಸಿದ್ದೇಶ್ವರ ಶ್ರೀಗಳು ಆರೋಗ್ಯವಾಗಿದ್ದಾರೆ, ಆತಂಕ ಬೇಡ: ಸುತ್ತೂರು ಸ್ವಾಮೀಜಿ - ಸುತ್ತೂರು ಸ್ವಾಮೀಜಿ

ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿರುವ ವಿಜಯಪುರದ ಸಿದ್ದೇಶ್ವರ ಶ್ರೀಗಳು- ಸ್ವಾಮೀಜಿ ದರ್ಶನಕ್ಕೆ ಸುತ್ತೂರು ಸ್ವಾಮೀಜಿ ಆಗಮನ- ಶ್ರೀಗಳ ಆರೋಗ್ಯದ ಕುರಿತು ಮಾಹಿತಿ

sutturu-seer-inquires-about-siddeswara-swamiji-health
ಸಿದ್ಧೇಶ್ವರ ಶ್ರೀಗಳು ಆರೋಗ್ಯವಾಗಿದ್ದಾರೆ, ಆತಂಕ ಬೇಡ: ಸುತ್ತೂರು ಸ್ವಾಮೀಜಿ
author img

By

Published : Jan 1, 2023, 4:34 PM IST

ವಿಜಯಪುರ: ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಆರೋಗ್ಯವಾಗಿದ್ದಾರೆ. ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಭಕ್ತರು ಯಾರೂ ಸಹ ಈ ಬಗ್ಗೆ ಆತಂಕಪಡಬಾರದು ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿಯವರು ಹೇಳಿದ್ದಾರೆ.

ವಿಜಯಪುರದಲ್ಲಿ ಸುತ್ತೂರು ಶ್ರೀಗಳು ಸಿದ್ದೇಶ್ವರ ಸ್ವಾಮೀಜಿ ಅವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದೇಶ್ವರ ಶ್ರೀಗಳ ಆರೋಗ್ಯ ಚೆನ್ನಾಗಿದೆ. ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಕೆಲ ಗಂಟೆಗಳ ಬಳಿಕ ಮತ್ತೊಮ್ಮೆ ವೈದ್ಯರು ಮಾಹಿತಿ ಹಂಚಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ನಡೆದಾಡುವ ದೇವರು ಎಂದೇ ಖ್ಯಾತರಾದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರಿಗೆ ಅನಾರೋಗ್ಯ ಹಿನ್ನೆಲೆ ಕಳೆದ ಕೆಲ ದಿನಗಳಿಂದ ಆಶ್ರಮದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅನಾರೋಗ್ಯದ ವಿಷಯ ತಿಳಿಯುತ್ತಲೇ ಆಶ್ರಮದತ್ತ ಅಪಾರ ಸಂಖ್ಯೆಯಲ್ಲಿ ಭಕ್ತರು, ರಾಜಕೀಯ ಮುಖಂಡರು ಆಗಮಿಸುತ್ತಿದ್ದಾರೆ.

ಇಂದು ಸಿದ್ದೇಶ್ವರ ಸ್ವಾಮೀಜಿಗಳ ದರ್ಶನಕ್ಕೆ ಮೈಸೂರಿನ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಗಮಿಸಿದ್ದರು. ಸುತ್ತೂರು ಶ್ರೀಗಳ ಜೊತೆ ವಿವಿಧ ಮಠಾಧೀಶರು ಸಹ ಆಗಮಿಸಿದ್ದರು.

ಇದನ್ನೂ ಓದಿ: ಸಿದ್ದೇಶ್ವರ ಶ್ರೀಗಳಿಗೆ ಅನಾರೋಗ್ಯ ಪಿಎಂ ಮೋದಿ ಸಿಎಂ ಬೊಮ್ಮಾಯಿ ಸಚಿವ ಜೋಶಿಯಿಂದ ಶ್ರೀಗಳ ಆರೋಗ್ಯ ವಿಚಾರಣೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.