ವಿಜಯಪುರ: ಜಿಲ್ಲೆಯ ತೊಗರಿ ಕೇಂದ್ರದಲ್ಲಿ ರೈತರಿಂದ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೇ ಖರೀದಿ ಕೇಂದ್ರದ ಸಿಬ್ಬಂದಿ ರೈತರಿಂದ ಹಣ ವಸೂಲಿ ಮಾಡುತ್ತಿರುವ ಆರೋಪದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಎರಡು ದಿನಗಳ ಹಿಂದೆ ಬಸವನ ಬಾಗೇವಾಡಿ ತಾಲೂಕಿನ ಖರೀದಿ ಕೇಂದ್ರದಲ್ಲಿ ಹಣ ವಸೂಲಿ ಮಾಡುತ್ತಿದ್ದ ಸಿಬ್ಬಂದಿ ಎಸಿಬಿ ಬಲೆಗೆ ಬಿದ್ದಿದ್ದರು. ಇದರ ಬೆನ್ನಲ್ಲೇ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾಖಂಡಕಿಯಲ್ಲಿನ ತೊಗರಿ ಖರೀದಿ ಕೇಂದ್ರದಲ್ಲಿ ಕಂಪ್ಯೂಟರ್ ಆಪರೇಟರ್ ರೈತರಿಂದ ಪ್ರತಿ ಕ್ವಿಂಟಲ್ ಗೆ 100 ರಿಂದ 150 ರೂಪಾಯಿ ವಸೂಲಿ ಮಾಡುತ್ತಿದ್ದಾರೆಂದು ಆರೋಪಿಸಲಾದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.