ವಿಜಯಪುರ : ಟಾಟಾ ಏಸ್ ವಾಹನ ಪಲ್ಟಿಯಾಗಿ 35ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಹಲವರ ಸ್ಥಿತಿ ಚಿಂತಾಜನಕವಾದ ಘಟನೆ ಇಂಡಿ ತಾಲೂಕಿನ ನಾದ ಕೆ.ಡಿ. ಗ್ರಾಮದ ಬಳಿ ಸಂಭವಿಸಿದೆ.
ಕೂಲಿ ಕೆಲಸ ಮುಗಿಸಿಕೊಂಡು ಸ್ವಗ್ರಾಮಕ್ಕೆ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ವಾಹನ ಚಾಲಕ ವಾಹನ ಓವರ್ ಟೆಕ್ ಮಾಡಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಗಾಯಾಳುಗಳನ್ನು ಇಂಡಿ ತಾಲೂಕಿನ ದೇಶಪಾಂಡೆ ಹಾಗೂ ಆಳೂರ ತಾಂಡಾದವರಾಗಿದ್ದಾರೆ.
ಗಾಯಾಳುಗಳನ್ನು ಇಂಡಿ ತಾಲೂಕು ಆಸ್ಪತ್ರೆ ಗೆ ದಾಖಲಿಸಲಾಗಿದೆ. ಚಿಂತಾಜನಕ ಸ್ಥಿತಿಯಲ್ಲಿರುವ ಗಾಯಾಳುಗಳು ಸೋಲಾಪುರ ವಿಜಯಪುರ ಬಿಎಲ್ಡಿಇ ಆಸ್ಪತ್ರೆ ಗೆ ದಾಖಲಿಸಲಾಗಿದೆ. ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.