ETV Bharat / state

ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿವೆ.. ಪ್ರೊ ರಾಜು ಆಲಗೂರ - Prof Raju Alagur

ಅಗತ್ಯ ವಸ್ತುಗಳ ಬೆಲೆ ಆಕಾಶಕ್ಕೇರಿದೆ. ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಪ್ರಶ್ನಿಸಿದರೆ ಅದು ದೇಶದ್ರೋಹ ಎಂಬಂತೆ ಬಿಂಬಿಸಲಾಗುತ್ತಿದೆ. ಮನಮೋಹನ್​​ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಪೆಟ್ರೋಲ್ ದರವನ್ನು ಕೇವಲ ಮೂರು ರೂ. ಏರಿಕೆ ಮಾಡಿದ್ದಕ್ಕೆ, ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದವರು ಈಗ ಎಲ್ಲಿ ಹೋಗಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಪ್ರೊ.ರಾಜು ಆಲಗೂರ ಅವರು ಪ್ರಶ್ನಿಸಿದ್ದಾರೆ..

ಡಿ.ಕೆ. ಶಿವಕುಮಾರ್ ಅವರು ಪ್ರತಿಜ್ಞಾ ಕಾರ್ಯಕ್ರಮ ಪೂರ್ವಭಾವಿ ಸಭೆ

author img

By

Published : Jun 23, 2020, 6:50 PM IST

Updated : Jun 25, 2020, 8:01 AM IST

ಮುದ್ದೇಬಿಹಾಳ (ವಿಜಯಪುರ) : ಮಾಜಿ ಪ್ರಧಾನಿ ಮನಮೋಹನ್​​ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಪೆಟ್ರೋಲ್ ದರವನ್ನು ಕೇವಲ ಮೂರು ರೂ. ಏರಿಕೆ ಮಾಡಿದ್ದಕ್ಕೆ, ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದ ಸಂಘ ಪರಿವಾರ, ಆರ್‌ಎಸ್‌ಎಸ್‌ನವರು ಈಗ ಪೆಟ್ರೋಲ್ ದರ ನೂರು ರೂ. ಆದ್ರೂ ಯಾಕೆ ಬಾಯಿ ಮುಚ್ಚಿಕೊಂಡು ಸುಮ್ಮನೆ ಕೂತಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಪ್ರೊ.ರಾಜು ಆಲಗೂರ ಅವರು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಪ್ರೊ.ರಾಜು ಆಲಗೂರ

ಪಟ್ಟಣದ ಹುಡ್ಕೋದಲ್ಲಿರುವ ನಾಡಗೌಡರ ನಿವಾಸದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪಕ್ಷದ ವತಿಯಿಂದ ಜುಲೈ 2ರಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಪ್ರತಿಜ್ಞಾ ಕಾರ್ಯಕ್ರಮ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅಗತ್ಯ ವಸ್ತುಗಳ ಬೆಲೆ ಆಕಾಶಕ್ಕೇರಿದೆ. ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಪ್ರಶ್ನಿಸಿದ್ರೆ ಅದು ದೇಶದ್ರೋಹ ಎಂಬಂತೆ ಬಿಂಬಿಸಲಾಗುತ್ತಿದೆ. ಆರ್ಥಿಕತೆ ದಿವಾಳಿಯಾಗಿದೆ. ಪ್ರಜಾಸತ್ತಾತ್ಮಕ ಹಕ್ಕುಗಳನ್ನು ದಮನ ಮಾಡುವ ಕುತಂತ್ರ ಬಿಜೆಪಿಯವರಿಂದ ನಡೆದಿದೆ ಎಂದು ಆರೋಪಿಸಿದರು.

ಪುರಸಭೆ ಮಾಜಿ ಸದಸ್ಯ ಹೆಚ್ ಬಿ ಸಾಲಿಮನಿ ಮಾತನಾಡಿ, ಪಕ್ಷಕ್ಕೆ ಬಲ ನೀಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ಕೆಪಿಸಿಸಿ ಡಿ ಕೆ ಶಿವಕುಮಾರ ಅವರ ಅಧಿಕಾರ ಸ್ವೀಕಾರದ ಕಾರ್ಯಕ್ರಮ ಪ್ರತಿಜ್ಞಾ ವಿಶೇಷವಾಗಿ ಆಯೋಜನೆ ಮಾಡಲಾಗುತ್ತಿದೆ. ಜನರ ಹತ್ತಿರಕ್ಕೆ ಕಾರ್ಯಕರ್ತರು ತೆರಳುವುದಕ್ಕೆ ಈ ಕಾರ್ಯಕ್ರಮ ವೇದಿಕೆ ಆಗಲಿದೆ ಎಂದು ಹೇಳಿದರು.

Last Updated : Jun 25, 2020, 8:01 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.