ವಿಜಯಪುರ : ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬನಿಗೆ ಆಸ್ಪತ್ರೆ ಸಿಬ್ಬಂದಿ ಚಿಕಿತ್ಸೆ ನೀಡಲು ನಿರಾಕರಿಸಿದ್ದರಿಂದ ಆ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಆರೋಪಿಸಲಾಗಿದೆ.
ಅಪಘಾತಕ್ಕೊಳಗಾಗಿದ್ದ ವ್ಯಕ್ತಿಯನ್ನ ಆತನ ಸಂಬಂಧಿಕರು ಏಳುಂಟು ಖಾಸಗಿ ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋದರೂ ಸಹ ಯಾರೂ ಚಿಕಿತ್ಸೆಗೆ ದಾಖಲಿಸಿಕೊಂಡಿರಲಿಲ್ಲ. ಇಲ್ಲಿ ಕೇವಲ ಕೋವಿಡ್ ಚಿಕಿತ್ಸೆ ನೀಡಲಾಗುತ್ತಿದೆ.
ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದು ಸಬೂಬು ಹೇಳಿದ್ದಾರೆ. ಇದರಿಂದ ತೀವ್ರ ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾನೆ. ಯಾವ ಆಸ್ಪತ್ರೆಗೆ ಹೋದ್ರೂ ಆಕ್ಸಿಜನ್ ಇಲ್ಲ, ಬೆಡ್ ಖಾಲಿ ಇಲ್ಲ ಎಂಬ ಉತ್ತರ ನೀಡಿದ್ದಾರೆ ಎಂದು ಆತನ ಕುಟುಂಬ ವರ್ಗ ಆರೋಪಿಸಿದೆ.
ಬೈಕ್ ಅಪಘಾತದಲ್ಲಿ ತಲೆಗೆ ಪೆಟ್ಟಾಗಿದ್ದರಿಂದ ಗಾಯಗೊಂಡು ಚಿಕಿತ್ಸೆ ಸಿಗದೆ ನಾಗೇಶ ಮೆಂಡೆಗಾರ(38) ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾನೆ. ಮೃತ ವ್ಯಕ್ತಿ ವಿಜಯಪುರ ನಗರದ ಮಾರುತಿ ಕಾಲೋನಿ ನಿವಾಸಿ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ : ಕೊರೊನಾಗೆ ಒಂದೇ ಕುಟುಂಬದ ಐವರು ಬಲಿ: ಇದು ಮನಕಲಕುವ ಕಹಾನಿ