ವಿಜಯಪುರ: ಒಬ್ಬ ನಾಗರಿಕನ ಮತ ದೇಶದ ಭವಿಷ್ಯಕ್ಕೆ ಮುನ್ನುಡಿ ಬರೆಯುತ್ತದೆ, ಮತದಾರನೇ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರಭು ಎಂದು ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಸದಾನಂದ ನಾಯಕ್ ಹೇಳಿದರು.
ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆದ ರಾಷ್ಟ್ರೀಯ ಮತದಾರ ದಿನದ ಕಾರ್ಯಕ್ರಮಕ್ಕೆ ಅಥಿತಿಗಳಾಗಿ ಆಗಮಿಸಿ ಮಾತನಾಡಿದ ಅವರು, ದೇಶದಲ್ಲಿ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳಾಗಿರುತ್ತಾರೆ. ಒಂದು ಸರ್ಕಾರ ಅಸ್ತಿತ್ವಕ್ಕೆ ಬರಲು ನಾಗರಿಕರ ಪ್ರತಿಯೊಂದು ಮತ ಅಮೂಲ್ಯವಾಗುತ್ತದೆ. ಚುನಾವಣೆ ಸಮಯದಲ್ಲಿ ಪ್ರತಿಯೊಬ್ಬ ಮತದಾರ ಮತದಾನ ಹಕ್ಕು ಚಲಾಯಿಸಬೇಕು ಎಂದು ನ್ಯಾಯಾಧೀಶ ಸದಾನಂದ ನಾಯಕ ಕರೆ ನೀಡಿದರು.
ಮತದಾನದ ಜಾಗೃತಿ ಕುರಿತು ಜಿಲ್ಲಾಡಳಿತದಿಂದ ವಿದ್ಯಾರ್ಥಿಗಳಿಗೆ ಈ ಹಿಂದೆ ಹಮಿಕೊಳ್ಳಲಾಗಿದ್ದ ರಂಗೋಲಿ, ಚರ್ಚಾಸ್ಪರ್ಧೆ, ರಸ ಪ್ರಶ್ನೆ ಸೇರಿದಂತೆ ಹಲವು ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗಿದ್ದು, 5 ಜನ ಹಿರಿಯ ಮತದಾರರಿಗೆ ಜಿಲ್ಲಾಡಳಿದಿಂದ ಸನ್ಮಾನಿಸಲಾಯಿತು.